ಯಾವಾಗ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ ಮಾಡಿದ ಮಲ್ಲಿಕಾರ್ಜುನ ಮುತ್ಯಾ!

ಯಾದಗಿರಿ : ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುತ್ಯಾ ಪರಾರಿಯಾಗಿದ್ದು, ಇದೀಗ ವಿಡಿಯೋದಲ್ಲಿ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ವಿಡಿಯೋ ಹೇಳಿಕೆಯನ್ನು ಮಲ್ಲಿಕಾರ್ಜುನ ಮುತ್ಯ ಬಿಡುಗಡೆ ಮಾಡಿದ್ದಾರೆ. ಭಕ್ತರು ಯಾರು ಆತಂಕ ಪಡಬೇಡಿ ಎಂದು ಹೇಳಿಕೆ ಕೊಟ್ಟಿದ್ದಾರೆ. ನಾನು ಎಲ್ಲಿಗೂ ಹೋಗಿಲ್ಲ ಇಲ್ಲೇ ಇದ್ದೇನೆ. ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವಿದೆ ಹೀಗಾಗಿ ಆಮಂತ್ರಣ ಪತ್ರಿಕೆ ನೀಡಲು ಬಂದಿದ್ದೇನೆ. ಮಠಕ್ಕೆ ಪೊಲೀಸರು ಬಂದು ಹೋಗಿದ್ದು ಗೊತ್ತಾಗಿದೆ. ಪೊಲೀಸರು ಯಾವಾಗ ಕರೆದರೂ ಕೂಡ ಹೋಗಿ ವಿಚಾರಣೆಗೆ ಹಾಜರಾಗುತ್ತೇನೆ … Continue reading ಯಾವಾಗ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ ಮಾಡಿದ ಮಲ್ಲಿಕಾರ್ಜುನ ಮುತ್ಯಾ!