ತುಮಕೂರು: ಚನ್ನಪಟ್ಟಣ ಕ್ಷೇತ್ರಕ್ಕೆ ನೀವು ಅಭ್ಯರ್ಥಿಯಾಗುತ್ತೀರಾ ಎನ್ನುವ ಚರ್ಚೆ ನಡೆಯುತ್ತಿದೆ ಎಂದಾಗ “ಚನ್ನಪಟ್ಟಣದಲ್ಲಿ ಯಾರೇ ನಿಂತರು ನಾನೇ ಅಭ್ಯರ್ಥಿ ಅಲ್ಲವೇ?” ಎಂದು ಮಾರ್ಮಿಕವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಉತ್ತರಿಸಿದರು.
ಮಾಜಿ ಸಚಿವ ನಾಗೇಂದ್ರ ಮನೆ ಸೇರಿ ಹಲವು ಕಡೆ ಇ.ಡಿ ದಾಳಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಉತ್ತರಿಸಿದ ಅವರು “ಇಷ್ಟು ದೊಡ್ಡ ಮೊತ್ತದ ಹಗರಣ ಎಂದ ಮೇಲೆ ಬ್ಯಾಂಕ್ ನವರು ತನಿಖೆ ನಡೆಸುವ ಅಧಿಕಾರವಿದೆ. ಇ.ಡಿ ಅವರು ಅವಶ್ಯಕತೆ ಇರದಿದ್ದರೂ ಬಂದಿದ್ದಾರೆ” ಎಂದು ಹೇಳಿದರು.
ನಾನು ಮಠಕ್ಕೆ ಬರುವುದು ಸಹಜ
ನೊಣವಿನಕೆರೆ ಮಠಕ್ಕೆ ಭೇಟಿ ಕೊಟ್ಟ ವಿಚಾರವಾಗಿ ಕೇಳಿದಾಗ “ನಾನು ನೊಣವಿನಕೆರೆ ಮಠಕ್ಕೆ ಬರೋದು ಸಹಜ. ಇದು ನನ್ನ ನಂಬಿಕೆ ಮತ್ತು ವಿಚಾರ” ಎಂದರು.
ಹಂದನಕೆರೆ ಮಠಕ್ಕೆ ಭೇಟಿ ನೀಡಿದ ಬಗ್ಗೆ ಕೇಳಿದಾಗ “ನಾನು ಮಠಕ್ಕೆ ಹೋಗಿರಲಿಲ್ಲ. ಅಲ್ಲಿ ಗವಿ ಸಿದ್ದೇಶ್ವರ ಬೆಟ್ಟಕ್ಕೆ ರಸ್ತೆ ಮಾಡಿಸಿದ್ದೆ. ಅರಣ್ಯ ಇಲಾಖೆಯಿಂದ ತೊಂದರೆ ಇದ್ದ ಕಾರಣಕ್ಕೆ, ಯಾವ ರೀತಿಯ ತೊಂದರೆ ಎದುರಾಗಿದೆ ಎಂದು ತಿಳಿಯಲು ನಾನೇ ಭೇಟಿ ನೀಡಿದ್ದೇ” ಎಂದು ಹೇಳಿದರು.
BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ | CM Siddaramaiah