ಮೈಸೂರು: ಮುಂದಿನ ಎರಡೂವರೆ ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಇರಲಿದ್ದೇನೆ. ಬಜೆಟ್ ಕೂಡ ಮಂಡಿಸುತ್ತೇನೆ. ನಿಮಗೆ ಯಾವುದೇ ಅನುಮಾನ ಬೇಡ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಇನ್ನೂ ಎರಡೂವರೆ ವರ್ಷ ಸಿಎಂ ಆಗಿರಲಿದ್ದೇನ. ಎರಡು ಬಜೆಟ್ ಕೂಡ ಮಂಡಿಸುತ್ತೇನೆ. ಮತ್ತೆ ಮತ್ತೆ ಸಿಎಂ ಬದಲಾವಣೆ ಬಗ್ಗೆ ಯಾಕೆ ಕೇಳುತ್ತೀರಿ. ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ಯಾ ಎಂಬುದಾಗಿ ಪ್ರಶ್ನಿಸಿದರು.
ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆಯ ಸೇರಿ ಎಲ್ಲದರ ಬಗ್ಗೆಯೂ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುತ್ತದೆ. ಅದರ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾತನಾಡಿದ್ಯಾ? ಇಲ್ಲ ತಾನೇ? ಹಾಗಿದ್ದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮತ್ತೆ ಮತ್ತೆ ಯಾಕೆ ಪ್ರಶ್ನೆ ಕೇಳುತ್ತೀರಿ ಎಂದರು.








