ಉಡುಪಿ : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ.ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ.
ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ.
ಉಡುಪಿ ಹಾಗೂ ಚಿಕ್ಕಮಂಗಳೂರು ಕ್ಷೇತ್ರಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಇದರ ಆಧಾರದ ಮೇಲೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಮತ್ತೊಮ್ಮೆ ಉಡುಪಿ ಮತ್ತು ಚಿಕ್ಕಮಗಳೂರು ಜನರು ಆಶೀರ್ವಾದ ಮಾಡಿ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದರು.
ಫೆಮಾ ಉಲ್ಲಂಘನೆ ಪ್ರಕರಣ: ಫೆ.19ರಂದು ವಿಚಾರಣೆಗಾಗಿ ಟಿಎಂಸಿ ನಾಯಕಿ ‘ಮಹುವಾ ಮೊಯಿತ್ರಾಗೆ’ ‘ಇಡಿ’ ಸಮನ್ಸ್
ಸಿದ್ದರಾಮಯ್ಯಗೆ ಮಗನೆ ಅನ್ನದೆ ಅಪ್ಪ, ಅಜ್ಜ, ಮಾಮಾ ಎನ್ನಲು ಸಾಧ್ಯವೇ?: ಮತ್ತೆ ವಿವಾದದ ಸುಳಿಯಲ್ಲಿ ಸಂಸದ ಹೆಗಡೆ
ಆಸ್ಕರ್ ಪ್ರಶಸ್ತಿ ವಿಜೇತ RRR ಸಿನಿಮಾದ ಛಾಯಾಗ್ರಾಹಕ ಸೆಂಥಿಲ್ ಕುಮಾರ್‌ಗೆ ‘ಪತ್ನಿ ವಿಯೋಗ’