ಬೆಂಗಳೂರು : ಹೈಕಮಾಂಡ್ ಸೂಚಿಸಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ‘ನನ್ನ ಸ್ಪರ್ಧೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಸೂಚಿಸಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಈ ತಿಂಗಳ 22 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.ಇದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸದಂತೆ ಇಲ್ಲದೇ ವರುಣಾಗೆ ಹೋಗುವಂತೆ ರಾಹುಲ್ ಗಾಂಧಿ ಯಾವುದೇ ಸಲಹೆ ನೀಡಿಲ್ಲ ಎಂದಿದ್ದಾರೆ. ಎಲ್ಲಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಸೂಚನೆ ಕೊಟ್ಟಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದೇನೆ, ಹೈಕಮಾಂಡ್ 2 ಕ್ಷೇತ್ರಗಳ್ಲಿ ನಿಲ್ಲಿ ಅಂದ್ರು ನಿಲ್ಲುತ್ತೇನೆ ಎಂದರು.
ನಿನ್ನೆ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯ ಬಳಿಕ ಪ್ರತ್ಯೇಕ ಮಾತುಕತೆ ನಡೆಸಿರುವ ರಾಹುಲ್ ಗಾಂಧಿ-ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಮತ್ತು ಇತರೆ ಕ್ಷೇತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿತ್ತು, ಇದನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಿದರೆ ಒಳ್ಳೆಯದು ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿತ್ತು, ಇದನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
ಕಾಂಗ್ರೆಸ್ ಸರ್ವೇ ವರದಿ ತಂದಿಟ್ಟ ಸಂಕಷ್ಟ: ತೇರದಾಳ ಕ್ಷೇತ್ರದಿಂದ ಮಾಜಿ ಸಚಿವೆ ಉಮಾಶ್ರೀಗೆ ಟಿಕೆಟ್ ಡೌಟ್?
ಬಾಗಲಕೋಟೆ: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕಾಂಗ್ರೆಸ್ ಪಕ್ಷದಿಂದ ನಿನ್ನೆ ನವದೆಹಲಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ಸಂಬಂಧ ಸಿಇಸಿ ಸಭೆ ಕೂಡ ನಡೆಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಸರ್ವೆ ವರದಿಯ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಇಂತಹ ವರದಿಯಿಂದಲೇ ಮಾಜಿ ಸಚಿವೆ ಉಮಾಶ್ರೀಗೆ ( Farmer Minister Umashree ) ಟಿಕೆಟ್ ಕೈತಪ್ಪೋ ಸಂಕಷ್ಟವನ್ನು ತಂದಿಟ್ಟಿದೆ ಎನ್ನಲಾಗುತ್ತಿದೆ.
ಮಾಜಿ ಸಚಿವ ಉಮಾಶ್ರೀಗೆ ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಟಿಕೆಟ್ ಸಿಗೋದು ಡೌಟ್ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಅವರ ಪರವಾಗಿ ಕಾಂಗ್ರೆಸ್ ನಡೆಸಿದಂತ ಸರ್ವೇ ವರದಿಯಲ್ಲಿ ತೀವ್ರ ಹಿನ್ನಲೆಯಾಗಿರೋದು ಎಂಬುದಾಗಿ ಹೇಳಲಾಗುತ್ತಿದೆ.
BIGG NEWS : ಕೋಲಾರದಲ್ಲಿ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ