ಬೆಂಗಳೂರು: ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶವಾಗಿದೆ. ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ ನನಗೆ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಸೂಸೈಡ್ ಬಾಂಬ್ ಜೊತೆ ಪಾಕಿಸ್ತಾನಕ್ಕೆ ಒಬ್ಬನೇ ಹೋಗಲು ಸಿದ್ದ, ಇದಕ್ಕೆ ಅಲ್ಲಾನ ಮೇಲಾಣೆ ಎಂದು ಕರ್ನಾಟಕ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಅವರು ವಿಜಯನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗುವೆ. ಪಾಕಿಸ್ತಾನ ಎಂದಿಗೂ ನಮಗೆ ಸಂಬಂಧವಿಲ್ಲ” ಎಂದು ಸಚಿವ ಜಮೀರ್ ಹೇಳಿದ್ದಾರೆಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶವಾಗಿದೆ. ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರಕಾರ ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ ಎಂದು ಎದೆ ತಟ್ಟಿಕೊಂಡು ಜಮೀರ್ ಹೇಳಿದರು.