ಉಡುಪಿ : ಇದೇ 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ಕಾಂಗ್ರೆಸ್ ಪಕ್ಷಕ್ಕೂ ಕೂಡ ಆಹ್ಹಾನ ನೀಡಲಾಗಿತ್ತು ಆದರೆ ಕಾಂಗ್ರೆಸ್ ಪಕ್ಷ ಇದನ್ನು ಗೌರವಯುತವಾಗಿ ತಿರಸ್ಕರಿಸಿದೆ. ಆದರೆ ಇದೀಗ ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ನಾನೂ ಕೂಡ ಅಯೋಧ್ಯ ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದೇನೆ ಒಂದಲ್ಲ ಒಂದು ದಿನ ರಾಮಮಂದಿರಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ ಹಾಗು ಕೃಷ್ಣನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ ನಾನು ನಮ್ಮ ಸಂಸ್ಕೃತಿ ಹಾಗೂ ಭಕ್ತಿಯನ್ನು ಆಚರಿಸುತ್ತೇನೆ ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡುವುದಿಲ್ಲ ನಾನು ಪಕ್ಷದ ಅಧ್ಯಕ್ಷ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ ನಾನು ದೈವಿಭಕ್ತರು ಎಂದು ಪದೇಪದೇ ಹೇಳುತ್ತೇನೆ ರಾಮಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗುವೆ ಅಯೋಧ್ಯೆಯಲ್ಲಿರುವ ರಾಮಮಂದಿರ ದೇಶದ 140 ಕೋಟಿ ಜನರದ್ದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಯತೀಂದ್ರ ಸಿಂದರಾಮಯ್ಯ ಯಾವ ಕಾರಣಕ್ಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದೇ ನಮ್ಮ ಗುರಿ ಡಾ ಯತಿಂದ್ರ ಹೇಳಿಕೆಗೆ ನಾನು ಯಾವುದೇ ರೀತಿಯಾದಂತಹ ಪ್ರತಿಕ್ರಿಯೆ ನೀಡುವುದಿಲ್ಲ.
ಕೇಂದ್ರ ಟಾರ್ಗೆಟ್ ಕೊಡುವ ಅವಶ್ಯಕತೆ ಇಲ್ಲ ಇದು ನಮ್ಮ ಜವಾಬ್ದಾರಿ.ಮತದಾರರು ಹೆಚ್ಚು ಸೀಟ್ಗಳನ್ನು ಗೆಲ್ಲಿಸಿ ಕೊಡುತ್ತಾರೆ ಎಂಬ ನಂಬಿಕೆ ಇದೆ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಹೈಕಮಾಂಡ್ ಕೊಡುತ್ತದೆ.ಈ ಬಗ್ಗೆ ನಾನು ಪ್ರತಿಕ್ರಿಯಿಸಿ ಇನ್ನೂ ಗೊಂದಲ ಮಾಡಿಕೊಳ್ಳುವುದಿಲ್ಲ ಎಂದು ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.