ಚಿತ್ರದುರ್ಗ : ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಅವರ ಮಟ್ಟಕ್ಕೆ ಹೋಗಿ ನಾನು ಮಾತನಾಡುವುದಿಲ್ಲ. ಯಡಿಯೂರಪ್ಪನವರು ರಾಹುಲ್ ಗಾಂಧಿ ಪಾದಕ್ಕೂ ಸಮ ಇಲ್ಲ ಎಂದು ನಾನು ಹೇಳಲ್ಲ ಎಂದು ಕಿಡಿಕಾರಿದ್ದಾರೆ.
ಮೋದಿ ಪಾದದ ಧೂಳಿಗೂ ಸಿದ್ದರಾಮಯ್ಯ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ. ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗುತ್ತಾ? ಪ್ರಧಾನ ಮಂತ್ರಿ ಅವರು. ಅದೇ ರೀತಿ ನೆಹರೂ ಕಾಲಿಗೂ ಯಡಿಯೂರಪ್ಪ ಸಮನಲ್ಲ ಅಂತಾ ಹೇಳಬಹುದಲ್ವಾ? ಆದರೆ ನಾನು ಅವರಿಗೆ ಆ ರೀತಿ ಹೇಳಲ್ಲ. ಅದು ಕೀಳು. ಸಿಎಂ ಆದವರು ಆ ತರಹ ಎಲ್ಲ ಮಾತನಾಡಬಾರದು ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ಒಬ್ಬ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಮಾತನಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅದಕ್ಕಾಗಿ ಅವರಿಗೆ ಬಹುಶಃ ಅರಳೋ ಮರುಳೋ ಆಗಿದೆ. ಅದಕ್ಕಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.