ಬೆಂಗಳೂರು: ನಾನು ಬಿಜೆಪಿಯನ್ನು ತೊರೆಯುತ್ತಿದ್ದೇನೆ ಎಂಬುದು ಸುಳ್ಳು. ನಾನು ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಸೇರುವ ಅವಶ್ಯಕತೆಯೂ ನನಗಿಲ್ಲ ಎಂಬುದಾಗಿ ಮಾಜಿ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂಬುದಾಗಿ ಹೇಳಿದ್ದಾರೆ.
ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ ಎಂಬ ಊಹಾಪೋಹಗಳನ್ನು ಕೆಲವರು ಪದೇ ಪದೇ ಹುಟ್ಟುಹಾಕುತ್ತಿದ್ದು, ಮಾಧ್ಯಮಗಳು ಇಂತಹ ವದಂತಿಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಪ್ರಧಾನಿ ಶ್ರೀ @narendramodi ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ.
ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ…
— Dr Sudhakar K (@DrSudhakar_) February 22, 2024
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’
ALEART: ‘ಆ್ಯಂಟಿಬಯೋಟಿಕ್’ ಮಾತ್ರೆ ಸೇವನೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ!