ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಅವರು ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕು ಅಂತ ಬಿಜೆಪಿ (BJP) ನಾಯಕರ ಹೇಳಿಕೆಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಸುಧಾಕರ್ (Sudhakar) ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಅಂಥ ಅವರು ಹೇಳಿದರು.
ಇನ್ನೂ ಇದೇ ವೇಳೆ ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದರು.