ಹುಬ್ಬಳ್ಳಿ : ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉದ್ಘಾಟನೆಯಾಗಿದ್ದಾರೆ. ಆದರೂ ಸಹ ಶಾಸಕ ಯತ್ನಾಳ್ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದು, ಇದೀಗ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಕೊಡುತ್ತೇನೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ನೀನು ರಾಜೀನಾಮೆ ಕೊಟ್ಟು ಚುನಾವಣೆಗೆ ಬಾ ಎಂದು ಬಿ.ವೈ ವಿಜಯೇಂದ್ರಗೆ ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ರಾಜೀನಾಮೆ ಕೊಡುತ್ತೇನೆ, ನೀನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಾ ಚುನಾವಣೆ ಎದುರಿಸೋಣ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು.
ನಾನು ಕೇವಲ ಭಗವಾ ಧ್ವಜದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಶಾಸಕ ಯತ್ನಾಳ್ ಹೇಳಿಕೆ ನೀಡಿದರು. ವಿಜಯೇಂದ್ರ ನಿನಗೆ ತಾಕತ್ ಇದೆಯಾ? ಚುನಾವಣೆಗೆ ನಾನು ರೆಡಿ ಇದ್ದೇನೆ. ಹಂದಿ ಕಡೆಯಿಂದ ನನ್ನ ವಿರುದ್ಧ ಮಾತನಾಡಿಸಬೇಡ ಎಂದು ಪರೋಕ್ಷವಾಗಿ ಎಂಪಿ ರೇಣುಕಾಚಾರ್ಯಗೆ ಹಂದಿ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.