ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರದ ಮೂಲ ಸೌಕರ್ಯಗಳಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಡ್ಡಿಪಡಿಸಿದ್ದೇನೆ ಎಂಬ ಬಗ್ಗೆ ಒಂದು ಪ್ರಕರಣವನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದ್ದಕ್ಕಿದ್ದ ಹಾಗೆ ಒತ್ತುವರಿ ತೆರವಿನ ಡ್ರಾಮಾ ನಡೆಯುತ್ತಿದೆ. ನಾನು ಈಗಾಗಲೇ ಕಲಾಪದಲ್ಲಿ ಹೇಳಿದ್ದೇನೆ. ಯುದ್ಧ ಕಾಲದಲ್ಲಿ ಶಸ್ತ್ರಾಸ್ತ್ರ ಅಭ್ಯಾಸ ಮಾಡುವ ಬದಲಾಗಿ, ನಾಲ್ಕೈದು ಕಡೆದ ತೆರವು ಮಾಡಿ ಸುಮ್ಮನಾಗುವುದಲ್ಲ. ಕಳೆದ 25 ವರ್ಷಗಳಿಂದ ಆದ ಅನಾಹುತಗಳು ಸೇರಿ ಕಳೆದ ಕಳೆದ ಐದು ವರ್ಷಗಳಿಂದ ನಗರದಲ್ಲಿ ಆಗಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರಕಾರವನ್ನು ಒತ್ತಾಯ ಮಾಡಿದರು.
‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಜೆಡಿಎಸ್ ಕಾಲದಲ್ಲಿ ಆಗಿರುವ ನಿರ್ಧಾರಗಳಿಂದ ಲೋಪ ಆಗಿದೆ ಎಂದು ಕೆಲವರು ಆರೋಪ ಮಾಡಿದ್ದಾರೆ. ನಾನು ಅಧಿಕಾರದಲ್ಲಿ ಇದ್ದಾಗ ಏನಾದರೂ ಲೋಪ ಆಗಿದ್ದರೆ, ಆರೋಪ ಮಾಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತೀನಿ. ನಾನು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ
‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ