Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟ್ವಿಶಾ ಶರ್ಮಾ ಸಾವು ಪ್ರಕರಣ: ಗಿರಿಬಾಲಾ ಸಿಂಗ್‌ಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ!

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ, ‘ED’ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು : ಸಿಎಂ ಸಿದ್ದರಾಮಯ್ಯ
KARNATAKA

ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ, ‘ED’ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು : ಸಿಎಂ ಸಿದ್ದರಾಮಯ್ಯ

By ಸುರೇಶ್‌

ಮಂಡ್ಯ : ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ!

1 Min Read

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

2 Mins Read

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

1 Min Read
Recent News

ಟ್ವಿಶಾ ಶರ್ಮಾ ಸಾವು ಪ್ರಕರಣ: ಗಿರಿಬಾಲಾ ಸಿಂಗ್‌ಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ!

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

Big News: ​ಬಕ್ರೀದ್ ಹಬ್ಬದಂದು ಗೋವಧೆಗೆ ತಡೆ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ !

State News
KARNATAKA

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ!

By ಸುರೇಶ್‌ KARNATAKA 1 Min Read

ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಂಪುಟ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್…

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

BIG NEWS : ಸಿಎಂ ಜೊತೆಗೆ ಎಲ್ಲ ರೀತಿಯ ಅಧಿಕಾರ ತ್ಯಾಗಕ್ಕೆ ಸಿದ್ಧ : ಹೈಕಮಾಂಡ್ ಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.