ಬೆಂಗಳೂರು: ಕಾರು ಅಪಘಾತದಲ್ಲಿ ಮೃತಪಟ್ಟಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರವು ಅನುಕಂಪದ ಆಧಾರದ ಅಡಿಯಲ್ಲಿ ಉದ್ಯೋಗ ನೀಡಿದೆ. ಬರೋಬ್ಬರಿ 92,500 ವೇತನದ ನೌಕರಿಯನ್ನು ಸರ್ಕಾರ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಅನುಕಂಪದ ಆಧಾರದಡಿ ನೇಮಕಾತಿ ಪತ್ರವನ್ನು ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ವಿತರಣೆ ಮಾಡಿದರು.
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಕಳೆದ ದಿನಾಂಕ 25-11-2025ರಂದು ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಆಸರೆಯಾಗಿ ನಿಂತಿದೆ. ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದಂತ ಅವರ ಪುತ್ರಿ ಕುಮಾರಿ ಚೈತನ್ಯಾ.ಎಂ ಬೀಳಗಿಗೆ ಅನುಕಂಪದ ಆಧಾರದ ನೌಕರಿಯನ್ನು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿವಂಗತ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಹುದ್ದೆಯ ನೇಮಕಾತಿಯ ಆದೇಶ ಪತ್ರವನ್ನು ವಿತರಿಸಿದರು.
ಅಂದಹಾಗೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ರೂ.49,050 ರಿಂದ ರೂ.92,000 ವೇತನ ಶ್ರೇಣಿಯ ಸಹಾಯಕ ಹುದ್ದೆಗೆ ಎರಡು ವರ್ಷಗಳ ಪರೀಕ್ಷಾರ್ಥಾವಧಿಯ ಮೇರೆಗೆ ನೇಮಕ ಮಾಡಲಾಗಿದೆ.

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್








