ಕೆಎನ್ ಎನ್ ನ್ಯೂಸ್ ಡೆಸ್ಕ್ : ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಕ್ಲರ್ಕ್ ನೇಮಕಾತಿಗೆ ಇಂದಿನಿಂದ ಅರ್ಜಿ ಆಹ್ವಾನಿಸಿದ್ದು, ಸಂಪೂರ್ಣ ಮಾಹಿತಿ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈ ವರ್ಷದ ಕ್ಲರ್ಕ್ ನೇಮಕಾತಿಯಲ್ಲಿ ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಯುಕೊ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟರ, ಇಂಡಿಯನ್ ಬ್ಯಾಂಕ್ ಮತ್ತು ಪಂಜಾಬ್, ಸಿಂದ್ ಬ್ಯಾಂಕ್‌ಗಳು ಪಾಲ್ಗೊಂಡಿವೆ.
ಹೇಗೆ ಅರ್ಜಿ ಸಲ್ಲಿಸಬೇಕು
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 01.07.2022
ಅರ್ಜಿ ಸಲ್ಲಿಸಲು ಕೊನೆಯ ದಿನ: 21.07.2022
ಅರ್ಜಿ ಶುಲ್ಕ ಸಲ್ಲಿಕೆ ಆರಂಭ: 01.07.2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 21.07.2022
ಅರ್ಜಿ ಸಲ್ಲಿಸಲು ಲಿಂಕ್:
ಐಬಿಪಿಎಸ್ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟು?
ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ೩ ವರ್ಷ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗುತ್ತದೆ.
ವಿದ್ಯಾರ್ಹತೆ ಏನು?
ಜುಲೈ21ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಪಟ್ಟಂತೆ ಸರ್ಟಿಫಿಕೇಟ್ ಹೊಂದಿರಬೇಕು.