ನವದೆಹಲಿ : ಜಸ್ಪ್ರೀತ್ ಬೂಮ್ರಾ ಕಳೆದ ವಾರ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನದ ನಂತ್ರ ನಂ.1 ಬೌಲರ್ ಸ್ಥಾನ ಪಡೆದಿದ್ರು. ಆದ್ರೆ, ಈಗ ನ್ಯೂಜಿಲೆಂಡ್ʼನ ಟ್ರೆಂಟ್ ಬೌಲ್ಟ್ ವಿರುದ್ಧ ತಮ್ಮ ಅಗ್ರಸ್ಥಾನವನ್ನ ಕಳೆದುಕೊಂಡಿದ್ದಾರೆ ಎಂದು ಬುಧವಾರ ಬಿಡುಗಡೆಯಾದ ಐಸಿಸಿ ರ್ಯಾಂಕಿಂಗ್‌ʼನಿಂದ ಗೊತ್ತಾಗಿದೆ.

ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಸರಣಿ ನಿರ್ಣಾಯಕ ಅಂತಿಮ ಏಕದಿನ ಪಂದ್ಯದಿಂದ ಬುಮ್ರಾಗೆ ವಿಶ್ರಾಂತಿ ನೀಡುವ ಭಾರತದ ನಿರ್ಧಾರವು ಅವರ ವಿರುದ್ಧ ಕೆಲಸ ಮಾಡಿದೆ ಎಂದು ಐಸಿಸಿ ಹೇಳಿದೆ. ಬುಮ್ರಾ ಹೊರತುಪಡಿಸಿ, ಇತರ ಭಾರತೀಯ ಆಟಗಾರರು ಐಸಿಸಿ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ನಾಲ್ಕು ಸ್ಥಾನಗಳ ಏರಿಕೆಯೊಂದಿಗೆ ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ 16ನೇ ಸ್ಥಾನದಲ್ಲಿದ್ದಾರೆ.

ಇನ್ನು ಹಾರ್ದಿಕ್ ಪಾಂಡ್ಯ ಏಕದಿನ ಆಲ್ರೌಂಡರ್‌ಗಳ ಪಟ್ಟಿಯಲ್ಲಿ 13 ಸ್ಥಾನ ಜಿಗಿದು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಚಹಲ್ ಏಳು ವಿಕೆಟ್‌ಗಳನ್ನು ಪಡೆದರೆ, ಪಾಂಡ್ಯ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಪ್ರಾಬಲ್ಯ ಸಾಧಿಸಿ‌, ಆರು ವಿಕೆಟ್‌ಗಳನ್ನು ಪಡೆದರು ಮತ್ತು ಒಟ್ಟು 100 ರನ್ ಗಳಿಸಿದರು.

ಆಲ್ರೌಂಡರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ನಾಲ್ಕು ಸ್ಥಾನಗಳ ಕುಸಿತ ಕಂಡು 11ನೇ ಸ್ಥಾನಕ್ಕೆ ಕುಸಿದಿದ್ದರೆ, ಕ್ರಿಸ್ ವೋಕ್ಸ್ ಬೌಲರ್ ಮತ್ತು ಆಲ್ರೌಂಡರ್ ಪಟ್ಟಿಯಲ್ಲಿ ಎರಡು ಸ್ಥಾನಗಳ ಕುಸಿತ ಕಂಡಿದ್ದಾರೆ. ಏಕದಿನ ಸರಣಿಯಲ್ಲಿ ಭಾರತ 2-1ರಿಂದ ಇಂಗ್ಲೆಂಡ್ ತಂಡವನ್ನ ಸೋಲಿಸಿತ್ತು.

ಬೆನ್ನು ನೋವಿನಿಂದಾಗಿ ಬುಮ್ರಾ ಕೊನೆಯ ಪಂದ್ಯವನ್ನ ಆಡಲು ಸಾಧ್ಯವಾಗಲಿಲ್ಲ, ಹೀಗಾಗಿ ಅವ್ರು ಅಗ್ರಸ್ಥಾನ ಕಳೆದುಕೊಳ್ಳುವಂತಾಯ್ತು. ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ 704 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಬುಮ್ರಾ ಅವರಿಗಿಂತ ಒಂದು ಪಾಯಿಂಟ್ ಹಿಂದಿದ್ದಾರೆ. ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಹಾಗೂ 100ಕ್ಕೂ ಹೆಚ್ಚು ರನ್ ಗಳಿಸಿರುವ ಪಾಂಡ್ಯ, ಬ್ಯಾಟ್ಸ್‌ಮ್ಯಾನ್‌ಗಳ ರ್ಯಾಂಕಿಂಗ್‌ನಲ್ಲಿ 8 ಸ್ಥಾನ ಮೇಲೇರಿ 42ನೇ ಸ್ಥಾನಕ್ಕೆ ತಲುಪಿದ್ದಾರೆ.

ಕಳೆದ ಏಕದಿನ ಪಂದ್ಯದಲ್ಲಿ ಅಜೇಯ 125 ರನ್ ಗಳಿಸಿದ್ದ ರಿಷಭ್ ಪಂತ್ 25 ಸ್ಥಾನ ಮೇಲೇರಿ 52ನೇ ಸ್ಥಾನಕ್ಕೆ ತಲುಪಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಬ್ಯಾಟ್ಸ್ ಮನ್ʼಗಳಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ರೆ, ರೋಹಿತ್ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ. ಇನ್ನು ಆಲ್‌ರೌಂಡರ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ನಾಲ್ಕು ಸ್ಥಾನಗಳ ಕುಸಿತ ಕಂಡು ಅಗ್ರ ಹತ್ತರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಈ ವಾರ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Share.
Exit mobile version