ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿರಬಹುದು, ಆದರೆ ಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ಭಾರತೀಯ ಬ್ಯಾಟ್ಸ್ಮನ್ಗಳು ಉತ್ತಮ ಹೊಂದಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಟಿ20 ರ್ಯಾಂಕಿಂಗ್ನಲ್ಲಿ 3ನೇ ಸ್ಥಾನಕ್ಕೆ ತಲುಪಿದ್ದಾರೆ.
ಭುವನೇಶ್ವರ್ ಕುಮಾರ್ಗೆ ಬಿಗ್ ಶಾಕ್:
ಟಿ20 ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ನಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಆಗಿದ್ದು. 14ನೇ ಕ್ರಮಾಂಕದಲ್ಲಿ ಆಡುತ್ತಿರುವ ನಾಯಕ ರೋಹಿತ್ ಶರ್ಮಾ ಅವರ ನಂತರದ ಸ್ಥಾನದಲ್ಲಿದ್ದಾರೆ. ಬೌಲರ್ಗಳ ಶ್ರೇಯಾಂಕವನ್ನು ನೋಡಿದರೆ, ಟೀಮ್ ಇಂಡಿಯಾದ ಭುವನೇಶ್ವರ್ ಕುಮಾರ್ ಎರಡು ಸ್ಥಾನಗಳನ್ನು ಕಳೆದುಕೊಂಡಿದ್ದಾರೆ, ಅವರು ಈಗ ಒಂಬತ್ತನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್ಗಳಲ್ಲಿ 52 ರನ್ಗಳನ್ನು ಕೊಳ್ಳೆಹೊಡೆದರು ಮತ್ತು ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಟಿ20 ರ್ಯಾಂಕಿಂಗ್ನಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿರುವ ಏಕೈಕ ಬೌಲರ್ ಭುವನೇಶ್ವರ್ ಆಗಿದ್ದಾರೆ.
ಆಲ್ರೌಂಡರ್ಗಳ ಶ್ರೇಯಾಂಕವನ್ನು ನೋಡಿದರೆ, ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಪ್ರದರ್ಶನಕ್ಕಾಗಿ ಬಹುಮಾನವನ್ನು ಪಡೆದಿದ್ದಾರೆ. ಆಲ್ರೌಂಡರ್ಗಳ ರ್ಯಾಂಕಿಂಗ್ನಲ್ಲಿ ಹಾರ್ದಿಕ್ ಪಾಂಡ್ಯ ಅಗ್ರ 5 ಸ್ಥಾನಕ್ಕೇರಿದ್ದು, 2 ಸ್ಥಾನ ಮೇಲೇರಿ 5ನೇ ಸ್ಥಾನಕ್ಕೆ ತಲುಪಿದ್ದಾರೆ. ಹಾರ್ದಿಕ್ ಪಾಂಡ್ಯ ಒಟ್ಟು 180 ರೇಟಿಂಗ್ಗಳನ್ನು ಹೊಂದಿದ್ದರೆ, ಶಕೀಬ್ ಅಲ್ ಹಸನ್ 248 ರೇಟಿಂಗ್ಗಳೊಂದಿಗೆ ಅಗ್ರ ಆಲ್ರೌಂಡರ್ ಆಗಿದ್ದಾರೆ.
Star Indian batter closes in on the top spot in the @MRFWorldwide ICC Men's Player T20I Rankings for batters ⬆️
Details 👇https://t.co/pdcD6jfjkN
— ICC (@ICC) September 21, 2022