BIG NEWS: ‘ಮಂಗನ ಕಾಯಿಲೆ’ಗೆ ಹೊಸ ವ್ಯಾಕ್ಸಿನ್ ತಯಾರಿಸಲು ‘ICMR’ ಒಪ್ಪಿಗೆ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದರು. ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ.‌ ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು … Continue reading BIG NEWS: ‘ಮಂಗನ ಕಾಯಿಲೆ’ಗೆ ಹೊಸ ವ್ಯಾಕ್ಸಿನ್ ತಯಾರಿಸಲು ‘ICMR’ ಒಪ್ಪಿಗೆ – ಸಚಿವ ದಿನೇಶ್ ಗುಂಡೂರಾವ್