ಬೆಂಗಳೂರು: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ
ಆ.21ರ ನಾಳೆ ಬೆಂಗಳೂರಿನ ಈ ಏರಿಯಾದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ