ಕಲಬುರಗಿ : ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಆಗುತ್ತಿರುವುದನ್ನು ವಿರೋಧಿಸಿ ಇದೇ ಫೆಬ್ರುವರಿ 7 ರಂದು ದೆಹಲಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಒಂದು ಪ್ರತಿಭಟನೆಯಲ್ಲಿ 136 ಶಾಸಕರು ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕಲ್ಬುರ್ಗಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕೇಂದ್ರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ. ಫೆಬ್ರವರಿ 7 ರೆಂದು ದೆಹಲಿಗೆ ಹೋಗಿ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಲಿದೆ. ಎಲ್ಲಾ ಸಚಿವರು ಹಾಗೂ ಶಾಸಕರು ಎಂಪಿಗಳು ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಈ ಬಗ್ಗೆ ಬಿಜೆಪಿಯವರು ಮೊದಲು ಆತ್ಮ ಅವಲೋಕನ ಮಾಡಿಕೊಳ್ಳಲಿ ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಕೇಂದ್ರದಿಂದ ಅನುದಾನ ಕೊಡಿಸಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಬಿಜೆಪಿಯವರು ಖಂಡಿಸಲಿ ರಾಜ ಬಿಜೆಪಿ ನಾಯಕರು ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.