ಮೈಸೂರು : ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಕೊಡಗು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಮೂರು ಕ್ಷೇತ್ರಗಳ ಸಚಿವರು ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಆಯೋಜಿಸಿದ ಸಭೆಯಲ್ಲಿ ಸಮುದ್ರಮಯ್ಯ ಮಾತನಾಡಿ ಬಿಜೆಪಿಯವರು ಕೇವಲ ‘ಜೈ ಶ್ರೀರಾಮ್’ ಎಂದು ಕೂಗಿದರೆ ನಾನು ‘ಜೈ ಸೀತಾರಾಮ್’ ಎಂದು ಕೂಗುತ್ತೇನೆ ನನ್ನ ಹೆಸರಲ್ಲೇ ರಾಮನಿದ್ದಾನೆ ಎಂದು ತಿಳಿಸಿದರು.
ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ. ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇನೆ. ನನ್ನ ಹೆಸರಿನಲ್ಲೇ ರಾಮನಿದ್ದಾನೆ.
ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿಗೆ ಬಿಗ್ ರಿಲೀಫ್ : ಜೆರೋಸಾ ಶಾಲೆಯ ವಿವಾದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
ಹತ್ತು ವರ್ಷ ಅಧಿಕಾರ ಮಾಡಿದ ನರೇಂದ್ರಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದ್ದಾನೆ.ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಮತ್ತು ನರೇಂದ್ರಮೋದಿ ಅವರು ಹೇಳಿದ್ದರಲ್ಲಿ ಒಂದನ್ನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ @BJP4India ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ.
ಶ್ರೀರಾಮಚಂದ್ರ, ಸೀತಾ , ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇನೆ. ನನ್ನ…
— Siddaramaiah (@siddaramaiah) March 24, 2024