ಕೋಲಾರ : ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ದೊಡ್ಡ ಜವಾಬ್ದಾರಿ ನೀಡಿದ್ದು ಕನಿಷ್ಠ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲದೆ ಹೋದರೆ ಸಿರಿವ ಸ್ಥಾನಕ್ಕೆ ಕುತ್ತು ಬರುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿತು ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ ಬರಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಕೋಲಾರ ಜಿಲ್ಲೆಯಲ್ಲಿ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ನಗರಭಿವೃದ್ಧಿ ಸಚಿವ ಬೈರತಿ ಸುರೇಶ್, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಿದೆ. ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಭೈರತಿ ಸುರೇಶ್ ಮಾತನಾಡಿದರು.
ಕುರುಬ ಸಮುದಾಯ ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಬೇಕು ನಿಮ್ಮ ಬೆಂಬಲ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಮೇಲಿರಲಿ ಬೇರೆ ಅಭ್ಯರ್ಥಿ ಗೆದ್ದರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ ಕೋಲಾರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.