ಬೆಂಗಳೂರು: ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ. ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ. ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು BJPಯವರು ಹೇಳಲಿ. ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲ್ ಹಾಕಿದ್ದಾರೆ.
4@siddaramaiah ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.
ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು #BJP ಯವರು ಹೇಳಲಿ
ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022
ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವಂತ ಅವರು, ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ BJP ಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ಧರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು BJPಯವರು ನಿರ್ಧರಿಸಬೇಕೆ? ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು BJPಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ., ನೋಟ ಪರರಿಚ್ಛೆ ಅಲ್ಲವೇ.? ಎಂದು ಪ್ರಶ್ನಿಸಿದ್ದಾರೆ.
1
ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ #BJP ಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ.@siddaramaiah ರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು?
ಏನನ್ನು ತಿನ್ನಬಾರದು ಎಂದು BJPಯವರು ನಿರ್ಧರಿಸಬೇಕೆ?
ನಮ್ಮ ಆಹಾರ, ನಮ್ಮ ಹಕ್ಕು.
ಇದನ್ನು ಕೇಳಲು BJPಯವರಿಗೆ ಅಧಿಕಾರ ಕೊಟ್ಟವರ್ಯಾರು?
ಊಟ ತನ್ನಿಚ್ಛೆ., ನೋಟ ಪರರಿಚ್ಛೆ ಅಲ್ಲವೇ.?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022
ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ. ಭಕ್ತಿ ಶುದ್ಧವಾಗಿರಬೇಕು ಎಂದಿದ್ದಾರೆ.
2
ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ.
ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ?ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ.
ಭಕ್ತಿ ಶುದ್ಧವಾಗಿರಬೇಕು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022
ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ. ಅದು ಅವರ ಆಹಾರ ಪದ್ದತಿ. ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. C.T.ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು. ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ? ಎಂದು ಹೇಳಿದ್ದಾರೆ.
3
ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ.
ಅದು ಅವರ ಆಹಾರ ಪದ್ದತಿ.ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. C.T.ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು.
ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022