ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ. ಒಂದು ವೇಳೆ ರದ್ದಾಗಿದ್ದಾರೆ ತಹಸೀಲ್ದಾರ್ ಗೆ ಅರ್ಜಿ ಸಲ್ಲಿಸಿ 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
ಈ ವಿಚಾರವಾಗಿ ಮಾಧ್ಯಮಗಳಿಗೆ ಮಾತನಾಡಿದ ಅವರು ಎಪಿಎಲ್ ಕಾರ್ಡುಗಳಿಗೂ ಸಾಕಷ್ಟು ಜನರು ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಹೇಳಿದಂತೆ ಪರಿಷ್ಕರಣೆ ಮಾಡುತ್ತಿದ್ದೇವೆ 14 ಲಕ್ಷ ಎಪಿಎಲ್ ಕಾರಣ ಅವರು ಬಿಪಿಎಲ್ ನಲ್ಲಿ ಇದ್ದಾರೆ. ಹಂತ ಹಂತವಾಗಿ ತೊಂದರೆ ಆಗದಂತೆ ಕಾರ್ಡ್ ಪರಿಷ್ಕರಣೆ ಮಾಡುತ್ತೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.








