ಬೆಂಗಳೂರು: ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ, ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ, 54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ. ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ಹಾಗಾದರೇ ಬಿಜೆಪಿಗೆ ( BJP Karnataka ) ದೊಡ್ಡ ವಿಚಾರ ಯಾವುದು? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ.
ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ,
ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ,ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ,
ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ,54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ.
ಯುವಕರ ನಿರುದ್ಯೋಗವೂ ಸಣ್ಣ ವಿಚಾರ.@BJP4Karnataka ಗೆ ದೊಡ್ಡ ವಿಚಾರ ಯಾವುದು?— Karnataka Congress (@INCKarnataka) January 3, 2023
ಈ ಬಗ್ಗೆ ಇಂದು ಟ್ವಿಟ್ ಮಾಡಿದ್ದು, ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರೇ, ಲವ್ ಜಿಹಾದ್ ಬಗ್ಗೆ ಆಮೇಲೆ ಮಾತಾಡುವಿರಂತೆ. ಬಿಟ್ ಕಾಯಿನ್ ಹಗರಣ, PSI ಅಕ್ರಮ, ಕೆಪಿಟಿಸಿಎಲ್ ಅಕ್ರಮ, ಸಾಲು ಸಾಲು ನೇಮಕಾತಿ ಅಕ್ರಮಗಳು, ಗುತ್ತಿಗೆದಾರರ ಆತ್ಮಹತ್ಯೆ, ರಸ್ತೆ ಗುಂಡಿಯ ಸಾವುಗಳು, ಹೆಚ್ಚಿದ ದಲಿತರ ಮೇಲಿನ ದೌರ್ಜನ್ಯ. ಮೊದಲು ಈ ವಿಷಯಗಳನ್ನು ಮಾತಾಡಿ ದಮ್ಮು, ತಾಕತ್ತು ತೋರಿಸಿ ಎಂದು ಹೇಳಿದೆ.
ಬಿಜೆಪಿ ಅಧ್ಯಕ್ಷ @nalinkateel ಅವರೇ, ಲವ್ ಜಿಹಾದ್ ಬಗ್ಗೆ ಆಮೇಲೆ ಮಾತಾಡುವಿರಂತೆ.
◆ಬಿಟ್ ಕಾಯಿನ್ ಹಗರಣ
◆PSI ಅಕ್ರಮ
◆ಕೆಪಿಟಿಸಿಎಲ್ ಅಕ್ರಮ
◆ಸಾಲು ಸಾಲು ನೇಮಕಾತಿ ಅಕ್ರಮಗಳು
◆ಗುತ್ತಿಗೆದಾರರ ಆತ್ಮಹತ್ಯೆ
◆ರಸ್ತೆ ಗುಂಡಿಯ ಸಾವುಗಳು
◆ಹೆಚ್ಚಿದ ದಲಿತರ ಮೇಲಿನ ದೌರ್ಜನ್ಯಮೊದಲು ಈ ವಿಷಯಗಳನ್ನು ಮಾತಾಡಿ ದಮ್ಮು, ತಾಕತ್ತು ತೋರಿಸಿ. pic.twitter.com/toOY9mHBVH
— Karnataka Congress (@INCKarnataka) January 3, 2023
ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ “ಸಣ್ಣ ವಿಷಯಗಳು”! ಹೇಳಿಕೊಳ್ಳಲು ಅಭಿವೃದ್ಧಿಪರ ಸಾಧನೆಗಳಿಲ್ಲದ ಬಿಜೆಪಿ ಅವುಗಳ ಬಗ್ಗೆ ಮಾತೇ ಆಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ ಎಂದು ಕಿಡಿಕಾರಿದೆ.
ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು.
ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ "ಸಣ್ಣ ವಿಷಯಗಳು"!
ಹೇಳಿಕೊಳ್ಳಲು ಅಭಿವೃದ್ಧಿಪರ ಸಾಧನೆಗಳಿಲ್ಲದ ಬಿಜೆಪಿ ಅವುಗಳ ಬಗ್ಗೆ ಮಾತೇ ಆಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ. pic.twitter.com/nwvQj9xelQ
— Karnataka Congress (@INCKarnataka) January 3, 2023