Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಟ್ಟೆ ಬೇಯಿಸುವಾಗ ನಿಂಬೆಹಣ್ಣಿನ ತುಂಡು ಹಾಕಿದ್ದೀರಾ? ಈ ಕಿಚನ್ ಟಿಪ್ಸ್ ನಿಮ್ಮ ಕೆಲಸವನ್ನು ಸುಲಭವಾಗಿಸುತ್ತೆ!

Gold News: ದೇಶಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಅಚ್ಚರಿಯ ಕರೆ ನೀಡಿದ್ದೇಕೆ? ಇಲ್ಲಿದೆ ಕಾರಣ!

BREAKING: ಡಿಎಂಕೆ ಶಾಸಕಾಂಗ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ಅವಿರೋಧ ಆಯ್ಕೆ | Udayanidhi Stalin

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕೆರೆ ಒತ್ತುವರಿಯಾಗಿದ್ದರೇ ಮುಲಾಜಿಲ್ಲದೇ ತೆರವುಗೊಳಿಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
KARNATAKA

BIG NEWS: ಕೆರೆ ಒತ್ತುವರಿಯಾಗಿದ್ದರೇ ಮುಲಾಜಿಲ್ಲದೇ ತೆರವುಗೊಳಿಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

By ವಸಂತ್‌ ಬಿ ಈಶ್ವರಗೆರೆ

ಬೆಂಗಳೂರು: ಖಾಸಗಿಯವರಿಂದ ಕೆರೆ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710  ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು

ವಿವಿಧ ಇಲಾಖಾವಾರು ವ್ಯಾಪ್ತಿಗೆ ಬರುವ ಕೆರೆಗಳ ಸರ್ವೆ ಕಾರ್ಯ, ಒತ್ತುವರಿ ತೆರವುಗೊಳಿಸಿರುವ ಹಾಗೂ ತೆರವಿಗೆ ಬಾಕಿ ಇರುವ ಕೆರೆಗಳ ಮಾಹಿತಿ ಪಡೆದರು.

ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ  41875 ಕೆರೆಗಳ ಪೈಕಿ 31033 ಕೆರೆಗಳು  ಅಳತೆ ಯಾಗಿವೆ.

11212 ಒತ್ತುವರಿ ಗುರುತಿಸಲಾಗಿದೆ. 5967ಕೆರೆಗಳ ಒತ್ತುವರಿ ತೆರವು ಗೊಳಿಸಲಾಗಿದೆ. ಸುಮಾರು 5245 ಕೆರೆಗಳು ತೆರವು ಗೊಳಿಸಲು ಬಾಕಿ ಇರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು  3778 ಕೆರೆಗಳಿದ್ದು, 166 ಕೆರೆಗಳ  ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆ ಗಳಿದ್ದು 167 ಕೆರೆಗಳು ಅಳತೆ ಯಾಗಿವೆ. ಸುಮಾರು 96 ಕೆರೆಗಳ ಒತ್ತುವರಿ ತೆರವು ಬಾಕಿ ಇದೆ.

ಕೆರೆಗಳ  ಮಲಿನವಾಗದಂತೆ  ತಡೆಯಲು ಸಂಸ್ಕರಣಾ ಘಟಕಗಳನ್ನು  ಸ್ಥಾಪಿಸಲು ಕಾರ್ಯ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆ ಗಳಿಂದ ಆದಾಯ ಗಳಿಸಲು ಸಾಧ್ಯವಾಗುವಂತೆ ಆನ್ಲೈನ್ ಟೆಂಡರ್ ಕರೆಯಲು ಸಭೆಯಲ್ಲಿ ಹಾಜರಿದ್ದ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳ ಸುತ್ತ ಬಫರ್ ಜೋನ್ ಅನ್ನು ನಿಗದಿ ಪಡಿಸಲು ತಾಂತ್ರಿಕ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಕೆ ಎನ್ ರಾಜಣ್ಣ, ಎಂ ಎಸ್ ಬೋಸರಾಜು, ಮಂಕಾಳ ವೈದ್ಯ, ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ಡಾ.‌ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

4 Mins Read

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

2 Mins Read
Recent News

ಮೊಟ್ಟೆ ಬೇಯಿಸುವಾಗ ನಿಂಬೆಹಣ್ಣಿನ ತುಂಡು ಹಾಕಿದ್ದೀರಾ? ಈ ಕಿಚನ್ ಟಿಪ್ಸ್ ನಿಮ್ಮ ಕೆಲಸವನ್ನು ಸುಲಭವಾಗಿಸುತ್ತೆ!

Gold News: ದೇಶಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಅಚ್ಚರಿಯ ಕರೆ ನೀಡಿದ್ದೇಕೆ? ಇಲ್ಲಿದೆ ಕಾರಣ!

BREAKING: ಡಿಎಂಕೆ ಶಾಸಕಾಂಗ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ಅವಿರೋಧ ಆಯ್ಕೆ | Udayanidhi Stalin

SHOCKING: ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

State News
KARNATAKA

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

By ವಸಂತ್‌ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರದ ಹೃದಯಭಾಗದಲ್ಲಿರುವ ನಗರಸಭೆಯ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗವೊಂದು ಅಕ್ರಮ ಒತ್ತುವರಿಯಾಗುತ್ತಿದ್ದರೂ, ನಗರಸಭೆ ಆಡಳಿತ ಮಂಡಳಿ ಮಾತ್ರ ಕಣ್ಣಿದ್ದೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.