ಮೈಸೂರು : ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿನ ತೆರಿಗೆ ಹಂತಗಳನ್ನು ಕಡಿಮೆ ಮಾಡುವುದರಿಂದ ರಾಜ್ಯಕ್ಕೆ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಭಾನು ವಾರ ಸುದ್ದಿಗಾರರ ಜೊತೆ ಅವರು ಮಾತ್ರ ನಾಡಿದರು. ಜಿಎಸ್‌ಟಿ ವ್ಯವಸ್ಥೆಯಲ್ಲಿನ ತೆರಿಗೆ ಹಂತಗಳನ್ನು ಕಡಿಮೆ ಮಾಡುವುದ ರಿಂದ ರಾಜ್ಯಕ್ಕೆ 15 ಸಾವಿರ ಕೋಟಿ ನಷ್ಟ ವಾಗಲಿದೆ ಎಂದು ಅಂದಾಜಿಸಲಾಗಿದೆ. 8 ರಾಜ್ಯಗಳು ಸೇರಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾ ಗಿ, ರಾಜ್ಯಗಳಿಗೆ ಆಗುವ ಈ ನಷ್ಟವನ್ನು ಕೇಂದ್ರ ಸರ್ಕಾರ S ವರ್ಷಗಳವರೆಗೆ ಭರಿಸ ಬೇಕೆಂದು ಆಗ್ರಹಿಸಿದರು.
2017ರಲ್ಲಿ ಜಿಎಸ್‌ಟಿ ಮಾ ಡಿದಾಗ 5 ವರ್ಷ ಮಾತ್ರ ಪರಿಹಾರ ಕೊಡ ಲಾಯಿತು. ಅಂದಿಗಿಂತ ಇಂದು ಶೇ.12 ರಿಂದ 13ರಷ್ಟು ಹೆಚ್ಚಿನ ತೆರಿಗೆ ಸಂಗ್ರಹವಾ ಗುತ್ತದೆ. ಅದನ್ನು ರಾಜ್ಯಗಳಿಗೆ ಕೊಡಲಿ ಎಂದು ಆಗ್ರಹಿಸುತ್ತಿದ್ದೇವೆ. ಸಿಗರೇಟ್, ಗುಟ್ಕಾ, ಪಾನ್ ಮಸಾಲ ಮುಂತಾದ ಲಕ್ಸುರಿ ವಸ್ತುಗಳ ಮೇಲೆ ಹೆಚ್ಚು ಸೆಸ್ ವಿಧಿಸಿ, ಆ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ಕೇಳುತ್ತಿದ್ದೇವೆ ಎಂದರು.