ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ( Congress Party ) ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( KPCC President DK Shivakumar ) ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ’ ಎಂದರು.
ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಹಾಗೂ ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ’ ಎಂದು ತಿಳಿಸಿದರು.
SHOCKING NEWS: ಅಮೆರಿಕದಲ್ಲಿ ಮೊದಲ ಬಾರಿಗೆ ಇಬ್ಬರು ಮಕ್ಕಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆ | Monkeypox
ಕೋಲಾರದಲ್ಲಿ ಬೇರೆ, ಬೇರೆ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕೋಲಾರದಲ್ಲಿ ಯಾವುದೇ ಬಣ ಇಲ್ಲ. ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಸಿಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದೇವೆ. ನಾವು ಎಲ್ಲ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲು ಸೂಚಿಸಿದ್ದು, ಅವರು ಮಾಡಿದ್ದಾರೆ’ ಎಂದು ಉತ್ತರಿಸಿದರು.
BIGG NEWS : ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ : ನಾಳೆಯಿಂದ ಮತ್ತೆ 2 ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
ನಾನು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ಹೋಗುವುದಿಲ್ಲ, ನನ್ನದೇ ಆದ ಪ್ರತ್ಯೇಕ ಗುರುತು ಇದೆ ಎಂಬ ಎಂ.ಬಿ. ಪಾಟೀಲ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ’ ಎಂದರು.