ಬೆಂಗಳೂರು: ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ( Congress Worker ) ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ( BJP MLA Appacchu Ranjan ) ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ @BJP4Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು?
ಕಾಂಗ್ರೆಸ್ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? 1/3 pic.twitter.com/R4Xjqwyz5D— Siddaramaiah (@siddaramaiah) August 20, 2022
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಅವರು, ‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.
'ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ @BJP4Karnataka ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ. 2/3 pic.twitter.com/EzsTTdFkbt
— Siddaramaiah (@siddaramaiah) August 20, 2022
ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಬಿಜೆಪಿ ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ.
ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ @BJP4Karnataka? 3/3— Siddaramaiah (@siddaramaiah) August 20, 2022