Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೆ ಕುಮಾರಸ್ವಾಮಿ ಮರ್ಯಾದೆ ಕೊಟ್ರೆ, ನಾನು ಅವರಿಗೆ ಕೊಡ್ತೀನಿ- ಡಿಸಿಎಂ ಡಿಕೆಶಿ
KARNATAKA

ನನಗೆ ಕುಮಾರಸ್ವಾಮಿ ಮರ್ಯಾದೆ ಕೊಟ್ರೆ, ನಾನು ಅವರಿಗೆ ಕೊಡ್ತೀನಿ- ಡಿಸಿಎಂ ಡಿಕೆಶಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ನೀವು ಕೊಟ್ಟಿರುವ ಚರ್ಚೆ ಸವಾಲನ್ನು ಕುಮಾರಸ್ವಾಮಿ ಅವರು ಸ್ವೀಕರಿಸುತ್ತಿಲ್ಲ ಯಾಕೆ ಎಂದು ಮಾಧ್ಯಮಗಳು ಕೇಳಿದಾಗ ಉತ್ತರಿಸಿದಂತ ಅವರು, “ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುವುದೇ ಅವರಿಂದಲೂ ಅದನ್ನು ಸ್ವೀಕರಿಸಲು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ ಕೊಟ್ಟು ಅವರು ಏನೇ ಅಂದರೂ ಸಹಿಸಿಕೊಂಡಿದ್ದೇನೆ. ಅವರು ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಮಾತನಾಡೋಣ” ಎಂದು ತಿಳಿಸಿದರು.

ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ

ಎನ್ ಒಸಿ ನೀಡಲು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂಬಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲಾ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆ ಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು. ನಾನು ಆ ವಿಚಾರ ಬಿಡುತ್ತೇನೆ. ಆದರೆ ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಯಡಿಯೂರಪ್ಪ, ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?” ಎಂದರು.

ಆರ್.ಅಶೋಕ್ ಒಕ್ಕಲಿಗ ನಾಯಕನಲ್ಲ ಎಂಬ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ನಾಯಕನೇ ಅಲ್ಲ. ಅವರು ನಾಯಕರು, ದೊಡ್ಡ ನಾಯಕರು. ನಾನು ಸಾಮಾನ್ಯ ಕಾರ್ಯಕರ್ತ” ಎಂದರು.

ನಟ ದ್ವಾರಕೀಶ್ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಸಂತಾಪ

BREAKING : ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ : ಜೆಸಿಬಿಗೆ ಆಟೋ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು

Share. Facebook Twitter LinkedIn WhatsApp Email

Related Posts

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

2 Mins Read

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

2 Mins Read
Recent News

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

State News
KARNATAKA

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

By ಸುರೇಶ್‌ KARNATAKA 2 Mins Read

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಬಿಸಿಎಂ (BCM) ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಮದ್ಯದ ಪಾರ್ಟಿ…

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.