ರಾಯಚೂರು : ತಮ್ಮ ತಂದೆಯವರನ್ನು ಹೈಕಮಾಂಡ್ ಸಿಎಂ ಸ್ಥಾನದಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬರುವುದು ಸಹಜ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್‌ನಿಂದ ಗುಡ್ ನ್ಯೂಸ್ ಸಿಗಲಿದೆ ಎಂಬ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದರು.
ಮೇ 15 ರೊಳಗೆ ಸಿಎಂ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ವಿಚಾರವಾಗಿ ನವೆಂಬರ್‌ನಿಂದಲೂ ಹೇಳುತ್ತಿದ್ದಾರೆ. ನಾನೂ ಅದಕ್ಕೆಲ್ಲ ಉತ್ತರ ಕೊಟ್ಟುಕೊಂಡು ಬರುತ್ತಿದ್ದೇನೆ. ಈ ವಿಚಾರದಲ್ಲಿ ಏನು ಹೇಳಬೇಕೋ ಈಗಾಗಲೇ ಎಲ್ಲಾ ಹೇಳಿ ಆಗಿದೆ. ನಾನು ಈ ವಿಷಯವಾಗಿ ಏನು ಮಾತನಾಡುವುದಿಲ್ಲ. ಏನೇ ಇದ್ದರೂ ಸಿಎಂ ಹಾಗೂ ಹೈಕಮಾಂಡ್‌ನ್ನೇ ಕೇಳಬೇಕು.
ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಮುಖ್ಯಾಂಶಗಳು:
-
ದಲಿತ ಸಿಎಂ ವಿಚಾರ: ಒಂದು ವೇಳೆ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಆ ಸ್ಥಾನಕ್ಕೆ ದಲಿತ ಸಿಎಂ ನೇಮಕ ಮಾಡಬೇಕೆಂಬ ಬೇಡಿಕೆ ಅಥವಾ ಚರ್ಚೆ ಮುನ್ನೆಲೆಗೆ ಬರುವುದು ಸಹಜ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಡಿಕೆಶಿ ‘ಗುಡ್ ನ್ಯೂಸ್’ ಬಗ್ಗೆ ಪ್ರತಿಕ್ರಿಯೆ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಹೈಕಮಾಂಡ್‌ನಿಂದ ಸಿಹಿ ಸುದ್ದಿ ಸಿಗಲಿದೆ ಎಂಬ ವದಂತಿಗಳ ಬಗ್ಗೆ ಕೇಳಿದಾಗ, “ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು.
-
ಸ್ಥಿತ್ಯಂತರದ ಮುನ್ಸೂಚನೆ: ತಂದೆಯವರ ಪರವಾಗಿ ಮಾತನಾಡುತ್ತಲೇ, ಪಕ್ಷದ ಒಳಗಿನ ಬೆಳವಣಿಗೆಗಳು ಮತ್ತು ಹೈಕಮಾಂಡ್‌ನ ನಿರ್ಧಾರಗಳಿಗೆ ಎಲ್ಲರೂ ತಲೆಬಾಗಲೇಬೇಕು ಎಂಬ ಸಂದೇಶವನ್ನು ಅವರು ಈ ಮೂಲಕ ರವಾನಿಸಿದ್ದಾರೆ.








