ಬೆಂಗಳೂರು: ನಮ್ಮ ಕಾಂಗ್ರೆಸ್ ಪಕ್ಷ ( Congress Party ) ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ( Central Government ) ಶಿಫಾರಸು ಮಾಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಘೋಷಣೆ ಮಾಡಿದ್ದಾರೆ.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. 4/4#SocialJustice
— Siddaramaiah (@siddaramaiah) December 11, 2022
ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಅವರು, ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ( BJP Government ) ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನುಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ @BJP4Karnataka ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ.
ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ @BSBommai ಅವರನ್ನು ಒತ್ತಾಯಿಸುತ್ತೇನೆ.
1/4#SocialJustice— Siddaramaiah (@siddaramaiah) December 11, 2022
ರಾಜ್ಯ ಬಿಜೆಪಿ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಹೇಳಿದ್ದಾರೆ.
ರಾಜ್ಯ @BJP4Karnataka ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು.
2/4#SocialJustice— Siddaramaiah (@siddaramaiah) December 11, 2022
ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ @BJP4Karnataka ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ.
3/4#SocialJustice— Siddaramaiah (@siddaramaiah) December 11, 2022