ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಬೆನ್ನೆಲುಬು ರಾಜ್ಯ ಸರ್ಕಾರ ಆರ್ ಎಸ್ ಎಸ್ ಸೇರಿದಂತೆ ಯಾವುದೇ ಸಂಘಟನೆ ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಇತ್ತೀಚಿಗೆ ಆದೇಶ ಹೊರಡಿಸಿತು ಇದೀಗ ಆರ್ ಎಸ್ ಎಸ್ ಪುರದ ಮತ್ತೆ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ ಆರ್ ಎಸ್ ಎಸ್ ರಿಜಿಸ್ಟರ್ ಆಗಿರುವ ದಾಖಲೆ ಇದ್ದರೆ ನನ್ನ ಮುಖದ ಮೇಲೆ ಎಸೆದು ಬಿಡಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ RSS ಅಧಿಕೃತವಾಗಿ ನೋಂದಣಿ ಮಾಡಿಕೊಂಡಿರುವ ಬಗ್ಗೆ ದಾಖಲೆ ತೋರಿಸಲಿ. ಅನಧಿಕೃತ ಸಂಘಟನೆಯಾಗಿರುವ ಆರ್ಎಸ್ಎಸ್ಗೆ ಎಲ್ಲಿಂದ ಹಣ ಬರುತ್ತಿದೆ? ಬಟ್ಟೆಗಳ ಖರೀದಿ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಯಾರು ಹಣ ಕೊಡುತ್ತಿದ್ಧಾರೆ ಎಂಬುದನ್ನು ಬಹಿರಂಗಪಡಿಸಿ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ಧಾರೆ.
ಆರ್‌ಎಸ್‌ಎಸ್ ಸಂಘಟನೆ ನೋಂದಣಿ ಮಾಡಿಸಿಕೊಂಡಿರುವ ಕುರಿತು ದಾಖಲೆ ನೀಡಿದರೆ ಈ ಬಗ್ಗೆ ಪ್ರಶ್ನಿಸುವುದಿಲ್ಲ. ಕಾನೂನುಬದ್ಧವಾಗಿ ನೋಂದಣಿ ಮಾಡಿಸಿಕೊಂಡರೆ, ಸಂಘಟನೆಗೆ ಯಾರು ಹಣ ನೀಡುತ್ತಾರೆ ಹೇಗೆ ಬರಲಿದೆ ಎಂಬುದನ್ನು ತಿಳಿಯಲಿದೆ. ಅಲ್ಲದೆ ತೆರಿಗೆ ವ್ಯಾಪ್ತಿಗೂ ಬರುವ ಕಾರಣದಿಂದಲೇ ಇದುವರೆಗೂ ಸಂಘಟನೆಯನ್ನು ನೋಂದಣಿ ಮಾಡಿಸಿಕೊಂಡಿಲ್ಲ ಎಂದು ಟೀಕಿಸಿದರು.