Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

07/04/2026 9:38 PM

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ST’ ಗೆ ಕುರುಬರು ಬಂದರೆ ಮೀಸಲು ಪ್ರಮಾಣವೂ ಹೆಚ್ಚಳ : CM ಸಿದ್ದರಾಮಯ್ಯ
KARNATAKA

ರಾಜ್ಯದಲ್ಲಿ `ST’ ಗೆ ಕುರುಬರು ಬಂದರೆ ಮೀಸಲು ಪ್ರಮಾಣವೂ ಹೆಚ್ಚಳ : CM ಸಿದ್ದರಾಮಯ್ಯ

By kannadanewsnow5708/10/2025 6:49 AM

ಬೆಂಗಳೂರು : ಕುರುಬರನ್ನು ಎಸ್.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಎಸ್ಸಿ/ಎಸ್ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್ಸಿ/ಎಸ್ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದರು.

ವಾಲ್ಮೀಕಿ, ಬೇಡ ಮತ್ತು ನಾಯಕ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಹೇಳಿದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು. ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದರು.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ.… pic.twitter.com/gRV80Jqtmt

— CM of Karnataka (@CMofKarnataka) October 7, 2025

If shepherds come to the state for 'ST' the reservation quota will also increase: CM Siddaramaiah
Share. Facebook Twitter LinkedIn WhatsApp Email

Related Posts

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

07/04/2026 9:38 PM1 Min Read

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM2 Mins Read

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM4 Mins Read
Recent News

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

07/04/2026 9:38 PM

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM

ಕುಡಿದು ಗಾಡಿ ಓಡಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್: ಆಸೀಸ್ ಬ್ಯಾಟಿಂಗ್ ಹೀರೋ ಬಂಧನ; ಮುಂದಿನ ತಿಂಗಳು ಕೋರ್ಟ್‌ಗೆ ಹಾಜರು!

07/04/2026 8:50 PM
State News
KARNATAKA

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

By kannadanewsnow0907/04/2026 9:38 PM KARNATAKA 1 Min Read

ಬೆಂಗಳೂರು: ಬೆಂಗಳೂರು ಕೇಂದ್ರದ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಕೇಂದ್ರದ ಪ್ರೆಂಚ್ ಭಾಷೆಯ ಉಪನ್ಯಾಸಕಿಯಾದ ತಗಡೂರು ಹಾಲಪ್ಪಗೌಡ ಸುಜಾತ…

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.