ಕಲಬುರ್ಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಒಂದೇ ದಿಕ್ಕಿನಲ್ಲಿ ಸಾಗಿದರೆ ರಾಜ್ಯದಲ್ಲಿ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ. ಅಕಸ್ಮಾತ್ ವಿರುದ್ಧ ದಿಕ್ಕಿನಲ್ಲಿ ಹೋದರೆ ತುಂಬಾ ಕಷ್ಟವಾಗುತ್ತದೆ ಎಂದು ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿದ್ದ ಕಲ್ಯಾಣಪಥ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ 16 ಬಜೆಟ್ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಮಲ್ಲಿಕಾರ್ಜುನ ಖರ್ಗೆ ಹಾಡಿ ಹೊಗಳಿದರು. ಸಿದ್ದರಾಮಯ್ಯ ಇಷ್ಟು ಬಜೆಟ್ ಮಂಡಿಸಲು ಕಾಂಗ್ರೆಸ್ ಪಕ್ಷ ಕಾರಣ. ಒಬ್ಬ ವ್ಯಕ್ತಿ ಒಳ್ಳೆಯ ಕೆಲಸ ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಅದೇ ರೀತಿ ಡಿಕೆ ಶಿವಕುಮಾರ್ ಕೂಡ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಡಿಸೆಮ್ ಡಿಕೆ ಶಿವಕುಮಾರ್ ಇಬ್ಬರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 11 ವರ್ಷದಲ್ಲಿ 11 ಸುಳ್ಳುಗಳನ್ನು ಹೇಳಿದ್ದಾರೆ. ಕಪ್ಪು ಹಣ, ಬುಲೆಟ್ ಟ್ರೈನ್ ಸೇರಿ ಪ್ರಧಾನಿ ಮೋದಿ ದೊಡ್ಡ ಸುಳ್ಳು ಹೇಳಿದ್ದಾರೆ. ಅವರ ಸುಳ್ಳುಗಳನ್ನು ಹೇಗೆ ನಂಬುತ್ತೀರಿ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.