ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಗೌಡ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲುತ್ತಾರೆ, 2 ನೇ ಬಾರಿ ಮಂತ್ರಿಯಾಗಲಿದ್ದಾರೆ ಎಂದು ಆಸೆ ಪಟ್ಟಿದ್ದೆವು, ಆದರೆ ಸಿದ್ದರಾಮಯ್ಯ ಕೋಲಾರದಿಂದ ಹಿಂದೆ ಸರಿಯುವ ಬಗ್ಗೆ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಕಸರತ್ತು ಆರಂಭವಾಗಿದೆ. ಇದರ ನಡುವೆ ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಹಲವು ಬೆಳವಣಿಗೆಗಳು ನಡೆದಿದೆ.ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಬೆಂಬಲಿಗರ ಪಟ್ಟು ಹಿಡಿದಿದ್ದು, ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಿದ್ದಾರೆ.ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಬೆಂಬಲಿಗರ ಪಟ್ಟು ಹಿಡಿದಿದ್ದು, ಸ್ಪರ್ಧಿಸದಿದ್ದರೆ ನಾವು ಪಕ್ಷ ಬಿಡುತ್ತೇವೆ, ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುತ್ತೇವೆ ಎಂದು ಹೇಳಿದ್ದಾರೆ.
ಕೋಲಾರದಲ್ಲಿ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.
ಇದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸದಂತೆ ಇಲ್ಲದೇ ವರುಣಾಗೆ ಹೋಗುವಂತೆ ರಾಹುಲ್ ಗಾಂಧಿ ಯಾವುದೇ ಸಲಹೆ ನೀಡಿಲ್ಲ ಎಂದಿದ್ದಾರೆ. ಎಲ್ಲಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಸೂಚನೆ ಕೊಟ್ಟಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದೇನೆ, ಹೈಕಮಾಂಡ್ 2 ಕ್ಷೇತ್ರಗಳ್ಲಿ ನಿಲ್ಲಿ ಅಂದ್ರು ನಿಲ್ಲುತ್ತೇನೆ ಎಂದರು.
ನಿನ್ನೆ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯ ಬಳಿಕ ಪ್ರತ್ಯೇಕ ಮಾತುಕತೆ ನಡೆಸಿರುವ ರಾಹುಲ್ ಗಾಂಧಿ-ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಮತ್ತು ಇತರೆ ಕ್ಷೇತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿತ್ತು, ಇದನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಿದರೆ ಒಳ್ಳೆಯದು ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿತ್ತು, ಇದನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
ಸಿದ್ಧರಾಮಯ್ಯ ಕೈಗೆ ಕರ್ನಾಟಕ ಜನತೆ ಮತ್ತೆ ಅಧಿಕಾರ ಕೊಡುವುದಿಲ್ಲ – ಬಿಜೆಪಿ
BIGG NEWS : ರೈತರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : 10 HP ವರೆಗಿನ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಘೋಷಣೆ
BIGG NEWS : ರೈತರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : 10 HP ವರೆಗಿನ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಘೋಷಣೆ