ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಜಟಾಪಟಿ ನಡೆಯುತ್ತಿದೆ. ಇದರ ಮಧ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಸಿಎಂ ಸಿದ್ದರಾಮಯ್ಯ ನಿನ್ನೆ ಭೇಟಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.
ಇನ್ನು ಸಿಎಂ ಬಲಾವಣೆ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದು ಸಿದ್ದರಾಮಯ್ಯ ಅವರನ್ನು ತೆಗೆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿಯೇ ಆಗುತ್ತದೆ. ದೊಡ್ಡ ಕ್ರಾಂತಿ, ಹೋರಾಟ ಆಗುತ್ತದೆ. ಅವರಿಗೋಸ್ಕರ ಸಾವಿರಾರು ಜನ ಜೈಲಿಗೆ ಹೋಗಲು ಸಿದ್ದರಿದ್ದಾರೆ. ಸಿಎಂ ಸ್ಥಾನದಿಂದ ತೆಗೆಯುವುದು ಅಷ್ಟು ಸುಲಭವಲ್ಲ ಸಿದ್ದರಾಮಯ್ಯ ಅವರನ್ನು ಏಕೆ ತೆಗೆಯಬೇಕು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ತೆಗೆದ್ರೆ ಮತ್ತೆ ಆ ಸ್ಥಾನಕ್ಕೆ ಅವರಂತಹ ಒಬ್ಬ ವ್ಯಕ್ತಿ ಕಾಂಗ್ರೆಸ್ ನಲ್ಲೂ ಇಲ್ಲ, ಬಿಜೆಪಿಯಲ್ಲೂ ಇಲ್ಲ ಮತ್ತು ಜೆಡಿಎಸ್ ನಲ್ಲೂ ಇಲ್ಲ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ತೆಗೆಯುವುದು ಅಷ್ಟು ಸುಲಭವಲ್ಲ. ಸಿಎಂ ಸ್ಥಾನದಿಂದ ಅವರನ್ನು ತೆಗೆಯುವುದರಿಂದ ರಾಜಕ್ಕೆ ಏನು ಒಳ್ಳೆಯದಲ್ಲ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ತೆಗೆಯುವುದಾದರೆ ಅವರು ಮಾಡಿರುವ ಅಪರಾಧವಾದರೂ ಏನು ಎಂದು ಪ್ರಶ್ನಿಸಿದರು.








