ಬೀದರ್ : ಪ್ರಜ್ವಲ್ ರೇವಣ್ಣ ಪರಾರಿ ಯಾಗಲು ತಿಳಿಯಬೇಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋನ್ ಅನ್ನು ಟ್ರ್ಯಾಪ್ ಮಾಡಿದರೆ ಪ್ರಜ್ವಲ್ ಪರಾರಿಯಾಗಲು ಸಹಕರಿಸಿದವರ ಕುರಿತಂತೆ ತಿಳಿಯುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.
ಇಂದು ಬೀದರ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕರಣದಲ್ಲಿ ತಪ್ಪು ಮಾಡಿದ್ದು ರಾಜ್ಯ ಸರ್ಕಾರ ಆದರೆ ಕೇಂದ್ರ ಸರ್ಕಾರದ ಮೇಲೆ ಹೊಣೆ ಹೊರಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ ಅಲ್ಲ ಎಂದು ಕೇಂದ್ರಕ್ಕೆ ಪತ್ರ ಬರೆದು ಕೊಡಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅವಮಾನ ಮಾಡಬೇಕೆಂಬ ದುರುದ್ದೇಶದ ಸ್ಕೀಮ್ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಬಿಟ್ಟವರು ಮುಖ್ಯಮಂತ್ರಿ ಸಿದ್ದರಾಮಯ್ಯ ಆದರೆ ಅವರು ಪ್ರಧಾನಿ ಮೋದಿ ಅವರಿಗೆ ಪ್ರಶ್ನಿಸುತ್ತಿದ್ದಾರೆ. ಕರ್ನಾಟಕದಲ್ಲಿ ಪೊಲೀಸರು ಇದರ ಸತ್ತಿದ್ದಾರಾ ಇಟಲಿಜೆನ್ಸ್ ಅವರು ಏನು ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಕಿಡಿ ಕಾರಿದರು.