Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ಕಣ್ಗಾವಲು ವ್ಯವಸ್ಥೆಗೆ ಬಲವಾದ ಪೆಟ್ಟು: ಗಲ್ಫ್‌ನಲ್ಲಿ ಇರಾನ್‌ನಿಂದ ಹೈಟೆಕ್ ರೇಡಾರ್ ಧ್ವಂಸ

03/03/2026 7:34 PM

BREAKING : ಇರಾನ್’ನಲ್ಲಿ ನೂತನವಾಗಿ ನೇಮಕಗೊಂಡ ರಕ್ಷಣಾ ಸಚಿವ ‘ಮಜೀದ್’ ಇಸ್ರೇಲ್ ದಾಳಿಯಲ್ಲಿ ಸಾವು

03/03/2026 7:14 PM

BREAKING : ‘ಕಾಲ ಮಿಂಚಿ ಹೋಗಿದೆ’ ; ಇರಾನ್ ಜೊತೆ ಮಾತುಕತೆ ನಿರಾಕರಿಸಿದ ಅಮೆರಿಕಾ ಅಧ್ಯಕ್ಷ ‘ಟ್ರಂಪ್’

03/03/2026 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow5711/04/2025 12:45 PM

ಬೆಂಗಳೂರು : ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಬಿಲ್ ಪಾವತಿ ಕಮಿಷನ್ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ಕೇಳಿದಾಗ, “ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಅವರಿಗೆ ಇಲಾಖೆಯ ಬಜೆಟ್ ಅರಿವಿಲ್ಲವೇ? ಅನುದಾನವೇ ಇಲ್ಲದಿರುವಾಗ ಅವರು ಗುತ್ತಿಗೆ ಹೇಗೆ ತೆಗೆದುಕೊಂಡರು?” ಎಂದರು.

“ಬಿಜೆಪಿ ಅವಧಿಯಲ್ಲಿ ನನ್ನ ಇಲಾಖೆಯೊಂದರಲ್ಲೇ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಗುತ್ತಿಗೆಯನ್ನು ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿ ಮಾಡಿಸುವಂತೆ ಶಾಸಕರ ಮೂಲಕ ಮನವಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆ” ಎಂದು ಹೇಳಿದರು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಚರ್ಚೆ ಬಗ್ಗೆ ಕೇಳಿದಾಗ, “ಜಾತಿಗಣತಿ ವರದಿಯನ್ನು ಮುಖ್ಯಮಂತ್ರಿಗಳಾಗಲಿ, ನಾನಾಗಲಿ ಇನ್ನು ನೋಡಿಲ್ಲ. ಇದನ್ನು ನೋಡಿದ ನಂತರ ಚರ್ಚೆ ಮಾಡಿ ಯಾವ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ಧರಿಸುತ್ತೇವೆ. ಈ ವಿಚಾರದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲು ಆಗುವುದಿಲ್ಲ” ಎಂದು ತಿಳಿಸಿದರು.

If the contractor has been asked for commission then they should file a complaint with the Lokayukta: DCM D.K. Shivakumar
Share. Facebook Twitter LinkedIn WhatsApp Email

Related Posts

ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse

03/03/2026 7:06 PM4 Mins Read
kh muniyappa on reservation

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

03/03/2026 6:47 PM2 Mins Read

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM5 Mins Read
Recent News

ಅಮೆರಿಕದ ಕಣ್ಗಾವಲು ವ್ಯವಸ್ಥೆಗೆ ಬಲವಾದ ಪೆಟ್ಟು: ಗಲ್ಫ್‌ನಲ್ಲಿ ಇರಾನ್‌ನಿಂದ ಹೈಟೆಕ್ ರೇಡಾರ್ ಧ್ವಂಸ

03/03/2026 7:34 PM

BREAKING : ಇರಾನ್’ನಲ್ಲಿ ನೂತನವಾಗಿ ನೇಮಕಗೊಂಡ ರಕ್ಷಣಾ ಸಚಿವ ‘ಮಜೀದ್’ ಇಸ್ರೇಲ್ ದಾಳಿಯಲ್ಲಿ ಸಾವು

03/03/2026 7:14 PM

BREAKING : ‘ಕಾಲ ಮಿಂಚಿ ಹೋಗಿದೆ’ ; ಇರಾನ್ ಜೊತೆ ಮಾತುಕತೆ ನಿರಾಕರಿಸಿದ ಅಮೆರಿಕಾ ಅಧ್ಯಕ್ಷ ‘ಟ್ರಂಪ್’

03/03/2026 7:06 PM

ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse

03/03/2026 7:06 PM
State News
KARNATAKA

ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse

By kannadanewsnow0903/03/2026 7:06 PM KARNATAKA 4 Mins Read

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಅಂದರೆ ಮಾರ್ಚ್ 03 ರಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ…

kh muniyappa on reservation

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

03/03/2026 6:47 PM

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM

ಪುರುಷರೇ ಗಮನಿಸಿ : ಸದೃಢ ‘ಸ್ಪರ್ಮ್‌’ಗಾಗಿ ಈ 3 ವಿಟಮಿನ್‌ ಗಳು ಅತ್ಯಗತ್ಯ!

03/03/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.