ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದಂತ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಜಮೀರ್ ಅಹ್ಮದ್ ಗೆ ಬಿಗ್ ರಿಲೀಫ್ ನೀಡಿದೆ. ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೇ ಕೆಲ ನೀತಿ ಜಾರಿಗೊಳಿಸುವ ಭರವಸೆ ಮತದಾರರಿಗೆ ಆಮಿಷವೊಡ್ಡಿದಂತೆ ಆಗುವುದಿಲ್ಲ ಎಂಬುದಾಗಿ ಮಹತ್ವದ ತೀರ್ಪು ನೀಡಿದೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಚಾಮರಾಜಪೇಟೆಯ ಮತದಾರ ಶಶಾಂಕ್ ಜೆ ಶ್ರೀಧರ್ ಎಂಬುವರು ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರು ವಿಚಾರಣೆ ನಡೆಸಿದರು.
ವಾದ-ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಸಲ್ಲಿಕೆಯಾಗಿದ್ದಂತ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ ಆಮಿಷವೊಡ್ಡಿದಂತೆ ಆಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.
ಲೋಕಸಭಾ ಚುನಾವಣೆ: ಕೇರಳದಲ್ಲಿ ಶೇ.70.21, ‘ವಯನಾಡ್’ನಲ್ಲಿ ಶೇ.72.70ರಷ್ಟು ಮತದಾನ
ಇನ್ನೂ ವರ್ಷಕ್ಕೆ ಎರಡು ಬಾರಿ ‘CBSE’ ಬೋರ್ಡ್ ಪರೀಕ್ಷೆ : ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ