ಬೆಂಗಳೂರು: ಪಾರ್ಟಿ ಇದ್ದರೆ ತಾನೇ ನಾನು. ಪಕ್ಷವೇ ಇಲ್ಲದಿದ್ದರೇ ನಾನಿಲ್ಲ. ನನಗೆ ಮಲ್ಲಿಕಾರ್ಜುನ ಖರ್ಗೆ ಕೊಟ್ಟ ದೀಕ್ಷೆ ಸ್ವೀಕಾರ ಮಾಡಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ನಿಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ” ಎಂದು ಹೇಳಿದರು.
ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ” ಎಂದರು.
ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆ ಅನೇಕರಿಗೆ ಇರುತ್ತದೆ ಎಂದು ಕೇಳಿದಾಗ, “ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ. ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾತನಾಡಿದ್ದಾರೆ, ಅವರೇ ಪ್ರಶ್ನೆ ಉತ್ತರ ಎಲ್ಲವನ್ನು ನೀಡಿದ್ದಾರೆ. ಸಧ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ” ಎಂದು ತಿಳಿಸಿದರು.
BMTC ಹವಾನಿಯಂತ್ರಿತ ಬಸ್, ವೇಗದೂತ ಸೇವೆ, ಪ್ರವಾಸದ ನೂತನ ಮಾರ್ಗಗಳಿಗೆ ರಾಮಲಿಂಗಾರೆಡ್ಡಿ ಚಾಲನೆ
ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿ : ನಾಳೆ `ಸ್ಮಾರ್ಟ್ ಕಾರ್ಡ್’ ವಿತರಣೆ