ಶಿವಮೊಗ್ಗ: ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಯಾವುದೇ ಆತಂಕಗಳಿಲ್ಲದೇ ನಿರ್ಭೀತಿಯಿಂದ ಪ್ರಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ತಿಳಿಸಿದರು.
ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ನೌಕರರ ಕುಂದು-ಕೊರತೆ, ಸಮಸ್ಯೆ, ಸೇವಾಸೌಲಭ್ಯಗಳ ತ್ವರಿತ ಸ್ಪಂದನೆಗಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನೌಕರರಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಯಾವುದೇ ಅಭದ್ರತೆ ಕಾಡದಂತೆ ನೋಡಿಕೊಳ್ಳಬೇಕಾದುದು ಹಾಗೂ ವ್ಯವಸ್ಥೆಗೆ ಪೂರಕವಾಗಿ ಸಹಕರಿಸಬೇಕಾದುದು ನಾಗರೀಕರೆಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕ ಜೀವನದಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಸೂಕ್ತ ರಕ್ಷಣೆ ಸಿಗಬೇಕು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನೌಕರರ ಮೇಲೆ ಸಲ್ಲದ ಕಾರಣಕ್ಕೆ ಹಲ್ಲೆಗೆ ಮುಂದಾಗುವುದು, ಅನುಚಿತವಾಗಿ ವರ್ತಿಸುವುದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ದಂಡನೆಗೆ ಗುರುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಲ್ಲದೇ ಪತ್ರಿಕೆಗಳಲ್ಲಿ ಆಧಾರರಹಿತ ಆರೋಪ ಮಾಡುವುದಲ್ಲದೇ ಅಸಂವಿಧಾನಿಕ ಪದಗಳ ಬಳಕೆ ಮಾಡುತ್ತಿರುವುದನ್ನೂ ಸಹ ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದವರು ನುಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಅವರು ಮಾತನಾಡಿ, ಕಾಲಕಾಲಕ್ಕೆ ಬದಲಾಗುತ್ತಿರುವ ಆಡಳಿತ ವ್ಯವಸ್ಥೆಗೆ ಪೂರಕವಾಗಿ ನೌಕರರೂ ಕೂಡ ಹೊಂದಿಕೊಳ್ಳಬೇಕಾಗಿದೆ. ಸೇವಾವಧಿಯಲ್ಲಿ ನೌಕರರಿಗೆ ಹೊಸದಾಗಿ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳು, ಕಾಯ್ದೆಗಳ ಪೂರ್ಣ ಜ್ಞಾನ ಇರಬೇಕು. ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನೌಕರರಿಗೂ ಅರಿವು ಇರಬೇಕಾದುದು ಅಗತ್ಯ. ಈ ದಿಸೆಯಲ್ಲಿ ವಿವಿಧ ಯೋಜನೆಗಳು, ಕಾಯ್ದೆಗಳ ಅನುಷ್ಠಾನದ ಕುರಿತು ತರಬೇತಿ ಕಾರ್ಯಾಗಾರಗಳನ್ನು ಜಿಲ್ಲಾಡಳಿತ ಮತ್ತು ಆಡಳಿತ ಸುಧಾರಣಾ ಇಲಾಖೆ, ಜಿಲ್ಲಾ ತರಬೇತಿ ಸಂಸ್ಥೆಗಳ ಮೂಲಕ ಆಯೋಜಿಸಬೇಕು ಎಂದರು.
ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಆರ್.ಪಾಪಣ್ಣ, ಉಪ ಕಾರ್ಯದರ್ಶಿ ಸುಜಾತ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥಸ್ವಾಮಿ, ಡಾ.ಹಿರೇಮಠ್, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್, ಭದ್ರಾವತಿಯ ಸಿದ್ದಬಸಪ್ಪ, ಶಿಕಾರಿಪುರದ ಮಧುಕೇಶ್ವರ್, ಸೊರಬದ ಮಂಜುನಾಥ್ ಹಾಗೂ ಜಿಲ್ಲಾ, ತಾಲ್ಲೂಕು ಸಂಘದ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ
BREAKING: ಮೈಕ್ರೋ ಫೈನಾನ್ಸಿಯರ್ ಕಿರುಕುಳದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ
ರಾಜ್ಯ ಸರ್ಕಾರದಿಂದ ‘ಟ್ರಾಫಿಕ್ ದಂಡ ಬಾಕಿ’ ಉಳಿಸಿಕೊಂಡಿರೋ ‘ವಾಹನ ಸವಾರ’ರಿಗೆ ಗುಡ್ ನ್ಯೂಸ್