ಮೈಸೂರು : ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ.ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
UPDATE : ಟರ್ಕಿ: ‘ಇಸ್ತಾಂಬುಲ್ ನೈಟ್ ಕ್ಲಬ್’ನಲ್ಲಿ ಭೀಕರ ಬೆಂಕಿ ಅವಘಡ : ಮೃತರ ಸಂಖ್ಯೆ 29ಕ್ಕೆ ಏರಿಕೆ
ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ ಬಿಜೆಪಿ ಆರ್ಎಸ್ಎಸ್ ಮೀಸಲಾತಿಯನ್ನೂ ವಿರೋಧಿಸುತ್ತದೆ. ಎಂದರು.
‘ವಿಶ್ವನಾಥನ್ ಆನಂದ್’ ಹಿಂದಿಕ್ಕಿ ಭಾರತದ ನಂ.1 ಚೆಸ್ ಆಟಗಾರ ಪಟ್ಟಕ್ಕೇರಿದ ’21 ವರ್ಷದ ಯುವಕ’
ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು. ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.
ನನಗೆ ಆಗದವರು ದ್ವೇಷದಿಂದ ನನ್ನ ಹೇಳಿಕೆಯನ್ನು ತಿರುಚಿದ್ದಾರೆ : ಆಯೋಗಕ್ಕೆ ಸ್ಪಷ್ಟನೆ ನೀಡಿದ ಶಾಮನೂರು ಶಿವಶಂಕರಪ್ಪ
ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ?ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು.ಶೂದ್ರರಿಗೆ ಬಿಜೆಪಿ ಆರ್ಎಸ್ಎಸ್ ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲಿ ಬಳಸಿಕೊಳ್ಳುತ್ತಾರೆ ಆದರೆ ಆರ್ಎಸ್ಎಸ್ನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ ಆರ್ಎಸ್ಎಸ್ ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.