ಬೆಂಗಳೂರು : ಅನಧಿಕೃತ ಮಸೀದಿಗಳನ್ನು ಕೆಡವಿ ದೇವಸ್ಥಾನ ಕಟ್ಟುವ ವಿಚಾರವಾಗಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಇದೀಗ ಬಿಜೆಪಿ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ. ಹೆಗಡೆ ಅವರನ್ನು ನೀವೇ ಹುಚ್ಚಾಸ್ಪತ್ರೆಗೆ ಸೇರಿಸಿ ಇಲ್ಲ ಅಂದ್ರೆ ನಾವೇ ಚಿಕಿತ್ಸೆ ಕೊಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಯ ವಿಚಾರವಾಗಿ ಸಂಸದ ಹೆಗಡೆ ಹುಚ್ಚ ಎಂದು ಬಿಜೆಪಿಯವರೇ ತಿಳಿದುಕೊಂಡಿದ್ದಾರೆ. ಹುಚ್ಚ ಎಂದು ತಿಳಿದುಕೊಂಡಿದ್ದಾರೆ ಎಂದು ಈಗ ಸಾಬೀತು ಆಯಿತು ಎಂದು ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಿಗೆ ವಾಗ್ದಾಳಿ ನಡೆಸಿದರು.
ಅವರ ಮಾತಿಗೆ ಬೆಲೆ ಕೊಡಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ. ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಯಾವುದೇ ರೀತಿಯಾದಂತಹ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಆತ ಬಿಜೆಪಿಯಲ್ಲಿರುವ ಹುಚ್ಚ. ಹುಚ್ಚಾಸ್ಪತ್ರೆಗೆ ಸೇರಿಸುವ ಕೆಲಸವನ್ನು ಮಾಡಲಿ.ಇಲ್ಲದಿದ್ದರೆ ನಾವು ಚಿಕಿತ್ಸೆ ಕೊಡಿಸುತ್ತೇವೆ ಎಂದು ತಿಳಿಸಿದರು.