ಮಂಡ್ಯ: ರಾಜ್ಯದ ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ನಿಕ್ಕಿಯಾದ ಮೇಲೆ ಇಂದಿಲ್ಲಿ ನಡೆದ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; ಜೆಡಿಎಸ್ ಮತ್ತು ಬಿಜೆಪಿ ನಡುವೆ ಆಗಿರುವ ಈ ಮೈತ್ರಿಯೂ ರಾಜ್ಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲಿದೆ. ನಾನು ಮಂಡ್ಯ ಲೋಕಸಭೆ ಅಭ್ಯರ್ಥಿಯಾಗಿ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಪ್ರಕಟಿಸಿದರು.
ಬಿರಿಯಾನಿ ತಿಂದು ಪಾದಯಾತ್ರೆ ಮಾಡಿದರೆ ಮೇಕೆದಾಟು ಆಗುತ್ತಾ?
ಮೇಕೆದಾಟುಗಾಗಿ ಪಾದಯಾತ್ರೆ ಮಾಡಿದರು ಕಾಂಗ್ರೆಸ್ ನವರು. ಇವತ್ತು ಏನಾಗಿದೆ? ಮೇಕೆದಾಟು ಕಟ್ಟಲು ಅನುಮತಿ ಕೇಳುತ್ತಿದ್ದಾರೆ. ಮತ್ತೆ ಆವತ್ತು ಪಾದಯಾತ್ರೆ ಯಾಕೆ ನಡೆಸಿದರು? ನಿಮ್ಮ ಮಿತ್ರಪಕ್ಷ ಡಿಎಂಕೆ ಪ್ರಣಾಳಿಕೆಯಲ್ಲಿ ಮೇಕೆದಾಟು ಕಟ್ಟಲು ಅವಕಾಶ ಕೊಡಲ್ಲ ಎಂದಿದ್ದಾರೆ. ಪೇಪರ್ ಪೆನ್ನು ಕೊಟ್ಟರೆ ನಾಳೆ ಬೆಳಿಗ್ಗೆ ಮೇಕೆದಾಟು ಮಾಡುತ್ತೇನೆ ಎಂದರಲ್ಲ. ಈಗ ಏನಾಗಿದೆ ನಿಮಗೆ? ಮೇಕೆದಾಟು ಯೋಜನೆ ಮಾಡಿ. ಮೇಕೆದಾಟು ಹೆಸರೇಳಿಕೊಂಡು ರಾಜಕಾರಣ ಮಾಡುವ ದಾರಿದ್ರ್ಯ ದೇವೇಗೌಡರಿಗೆ ಬಂದಿಲ್ಲ. ಪಾದಯಾತ್ರೆಯಿಂದ ನೀರು ತರಲು ಆಗಲ್ಲ ಶಿವಕುಮಾರಣ್ಣ. ಪ್ರಾಧಿಕಾರದಲ್ಲಿ ಸರಿಯಾದ ವಾದ ಮಂಡನೆ ಆಗಬೇಕು. ಬಿರಿಯಾನಿ ತಿಂದು ಪಾದಯಾತ್ರೆ ಮಾಡಿದರೆ ಆಗಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ನೇರ ವಾಗ್ದಾಳಿ ನಡೆಸಿದರು.
ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ- ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್
BREAKING : ಬಾಗಲಕೋಟೆ : ಚಲಿಸುತ್ತಿದ್ದ ‘KSRTC’ ಬಸ್ ನಿಂದ ಬಿದ್ದು ‘ವಿದ್ಯಾರ್ಥಿನಿ’ ಸಾವು