ಬೆಂಗಳೂರು: 2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ( Government Primary and High School ) ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರಾಗಿ ( Guest Teacher ) ಕರ್ತವ್ಯ ನಿರ್ವಹಿಸುತ್ತಿರುವವರ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
ತೋಟದ ಮನೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಶೀಘ್ರದಲ್ಲಿ ಸಿಗಲಿದೆ ವಿದ್ಯುತ್ ಸಂಪರ್ಕ
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ರಾಜ್ಯದ ತಾಲೂಕು ಪಂಚಾಯ್ತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕ ಹುದ್ದೆಗಳಿಗೆ ಎದುರಾಗಿ, ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ 17,505.23 ಲಕ್ಷಗಳನ್ನು ಬಿಡುಗಡೆ ಮಾಡಿ ಆದೇಶಿಸಿದೆ.
ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸುವ ಉದ್ದೇಶ ಇಲ್ಲ : – ಡಾ. ಸಿ.ಎನ್. ಅಶ್ವಥ್ ನಾರಾಯಣ
ಇನ್ನೂ ಬಿಡುಗಡೆಗೊಳಿಸಲಾದ ಅನುದಾನವನ್ನು ಪ್ರಸ್ತಾವಿತ ಉದ್ದೇಶಕ್ಕಾಗಿ ಆದ್ಯತೆಯ ಮೇಲೆ ವೆಚ್ಚ ಮಾಡಬೇಕು. ಯಾವುದೇ ಹಂತದಲ್ಲಿ ತಾಲೂಕು ಪಂಚಾಯ್ತಿ ಅಥವಾ ಅನುಷ್ಟಾನಾಧಿಕಾರಿಗಳ ಹಂತದಲ್ಲಿ ವಿಳಂಬವಾದಲ್ಲಿ ಆ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.