Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿ ಧ್ಯೋತಕ, ಇದನ್ನು ಬಿಡಿ: ಸಿದ್ಧರಾಮಯ್ಯ
KARNATAKA

ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿ ಧ್ಯೋತಕ, ಇದನ್ನು ಬಿಡಿ: ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು.

ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ ಎಂದು ಸೂಚಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಮಾಡಿರುವ ಭಾಷಣವನ್ನು ನೀವೆಲ್ಲಾ ಓದಬೇಕು. ಐತಿಹಾಸಿಕ ಕಾರಣಗಳಿಂದಾಗಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀವಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ ಎಂದರು.

ಅಂಬೇಡ್ಕರ್ ಅವರಿಂದ ಬುದ್ದ, ಬಸವ, ಗಾಂಧಿ ಎಲ್ಲರೂ ಸಮಾಜದ ಸಮಾನತೆಗಾಗಿ, ತಾರತಮ್ಯದ ಸಮಾಜದ ಬದಲಾವಣೆಗಾಗಿ ಶ್ರಮಿಸಿದರು. ಆದರೂ ಇನ್ನೂ ಅಸಮಾನತೆ ಹೋಗಿಲ್ಲ ಎಂದರೆ ಎಲ್ಲರಿಗೂ ಸಮಾನ ಅವಕಾಶ ಸಿಗದೇ ಇರುವುದೇ ಮುಖ್ಯ ಕಾರಣ. ಆದ್ದರಿಂದ ಸಮಾಜದಲ್ಲಿ ಪಟ್ಟಭದ್ರರು ಇನ್ನೂ ಹೆಚ್ಚಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದನ್ನು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಿ ಎಂದು ಕರೆ ನೀಡಿದರು.

ಎಲ್ಲಿಯವರೆಗೂ ಜಾತಿ, ವರ್ಗ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಅಸಮಾನತೆ ಇರುತ್ತದೆ. ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ , ಸೇವೆ ಮುಖ್ಯ ಎಂದರು.

KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ದವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಅವರು ಉಪಸ್ಥಿತರಿದ್ದರು.

ರಾಜ್ಯದ ಹಿಂದುಳಿದ ವರ್ಗಗಳ P.hd ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಫೆಲೋಶಿಪ್’ಗಾಗಿ ಅರ್ಜಿ ಆಹ್ವಾನ

ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿ ಅನುಸಾರ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.