ನವದೆಹಲಿ : ಫಿಫಾ ವಿಶ್ವಕಪ್ 2026ರ ಅರ್ಹತಾ ಸುತ್ತಿನ 3ನೇ ಸುತ್ತಿಗೆ ಅರ್ಹತೆ ಪಡೆಯಲು ರಾಷ್ಟ್ರೀಯ ತಂಡ ವಿಫಲವಾದ ನಂತರ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಕ್ ಅವರನ್ನ ವಜಾಗೊಳಿಸಲು ನಿರ್ಧರಿಸಿದೆ.
ಅಂದ್ಹಾಗೆ, ಕತಾರ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಭಾರತ 2-1 ಗೋಲುಗಳಿಂದ ಸೋಲನುಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ತಂಡವು ಕುವೈತ್ ಮತ್ತು ಅಫ್ಘಾನಿಸ್ತಾನವನ್ನ ಒಳಗೊಂಡ ಗುಂಪಿನಲ್ಲಿ ಮೂರನೇ ಸ್ಥಾನ ಪಡೆಯಿತು. ಕುವೈತ್ ವಿರುದ್ಧದ ಕೊನೆಯ ಪಂದ್ಯದ ನಂತರ ಸುನಿಲ್ ಛೆಟ್ರಿ ಅಂತರರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತರಾದ ಕೆಲವೇ ವಾರಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿರಿಯ ಅಧಿಕಾರಿಗಳು ಭಾನುವಾರ ವರ್ಚುವಲ್ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಐಎಫ್ಎಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜೂ.21ರ ರಾತ್ರಿ ಆಕಾಶದಲ್ಲಿ ಅಪರೂಪದ ದೃಶ್ಯ ; ‘ಸ್ಟ್ರಾಬೆರಿ ಮೂನ್’ ನೋಡುವುದು ಹೇಗೆ ಗೊತ್ತಾ.?
ತೈಲ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಜೆಡಿಎಸ್: ನಾಳೆ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಗೆ ನಿರ್ಧಾರ
BREAKING : ರಾಯ್ ಬರೇಲಿ ಉಳಿಸಿಕೊಂಡ ‘ರಾಹುಲ್ ಗಾಂಧಿ’, ವಯನಾಡ್’ನಿಂದ ‘ಪ್ರಿಯಾಂಕಾ’ ಸ್ಪರ್ಧೆ