ಬೆಂಗಳೂರು: : ಆಗಸ್ಟ್ 12ರಿಂದ 25ರವರೆಗೆ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಅವ್ಯವಹಾರಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ.
ಇನ್ನೂ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ದ್ವೀತಿಯ ಪಿಯು ಪೂರಕ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ..
ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ವಲಯದ ಒಳಗೆ ಪರೀಕ್ಷಾರ್ಥಿಗಳು ಮತ್ತು ಸಂಬಂಧಪಟ್ಟವರನ್ನು ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ.
ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಸದಸ್ಯರಾಗಿರುವರು.
ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತು ಕೂಡ ಕೈಗೊಳ್ಳಲಾಗಿದೆ.