ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏಪ್ರಿಲ್.29ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ನೋಂದಾಯಿಸಿಕೊಂಡಿರುವವರಿಗೆ ಪ್ರವೇಶ ಪತ್ರವನ್ನು ಕೂಡ ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿತ್ತು. ಆದ್ರೇ ಕೆಲ ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲಿ ಗೊಂದಲಗಳಿದ್ದವು. ಇಂತಹ ಗೊಂದಲಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಗಳು ತೆಗೆದುಕೊಂಡಿರುವ ವಿಷಯದ ಜೊತೆಗೆ ಹೆಚ್ಚುವರಿ ವಿಷಗಳು ಮುದ್ರಣಗೊಂಡಿರುವುದು ಮಂಡಳಿಯ ಗಮನಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹೀಗೆ ಹೆಚ್ಚುವರಿ ವಿಷಯಗಳು ತಮ್ಮ ಪ್ರವೇಶ ಪತ್ರದಲ್ಲಿ ಮುದ್ರಣಗೊಂಡಿದ್ದರೂ ಯಾವುದೇ ಗೊಂದಲಕ್ಕೆ ಒಳಗಾಗದೇ, ತಾವು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿಷಯಗಳಿಗೆ ಮಾತ್ರ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲಿನ ಗೊಂದಲಕ್ಕೆ ಪರಿಹಾರ ಸೂಚಿಸಿದೆ.

‘ತಪ್ಪು ತಿಳುವಳಿಕೆ’ : ಮಾನವ ಹಕ್ಕುಗಳ ಕುರಿತ ಅಮೆರಿಕದ ವರದಿಯನ್ನ ‘ತಾರತಮ್ಯ’ ಎಂದ ಭಾರತ

BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

Share.
Exit mobile version